ಅರ್ಜಿ ಆಹ್ವಾನ
ಶಿವಮೊಗ್ಗ: ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ 6 ವೃತ್ತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಎಸ್ಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2 ವರ್ಷಗಳ ಅವಧಿಯ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ತರಬೇತಿಗೆ 1 ಸ್ಥಾನ, ಮೆಕ್ಯಾನಿಕ್ ಕನ್ಸೂಮರ್ ಎಲೆಕ್ಟ್ರಾನಿಕ್ಸ್ ತರಬೇತಿಗೆ 2 ಸ್ಥಾನ, ಇನ್ಫಾರ್ಮೆಷನ್ ಟೆಕ್ನಾಲಜಿ ಒಂದು ವರ್ಷ ಅವಧಿಯ ಐಡಿಡಿ ತರಬೇತಿ ಹಾಗೂ ಡ್ರೆಸ್ ಮೇಕಿಂಗ್ ತರಬೇತಿಗೆ ತಲಾ 1 ಸ್ಥಾನಗಳು ಲಭ್ಯವಿರುತ್ತವೆ. ಆ. 23ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಗಸ್ಟ್ 24ರಂದು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08181 299466 ಸಂಪರ್ಕಿಸಬಹುದು.