ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Lingaraj Badiger
Updated On : 24 Aug 2013, 10:54 am

ಶಿವಮೊಗ್ಗ: ಇಲ್ಲಿನ ಹವ್ಯಕ ಸಂಘ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರತಿಭಾ ಪುರಸ್ಕಾರಕ್ಕೆ ಎಸ್ಸೆಸೆಲ್ಸಿಯಲ್ಲಿ ಶೇ.80, ಎಂಜಿನಿಯರಿಂಗ್, ಸ್ನಾತಕೋತ್ತರ ಹಾಗೂ ಡಿಪ್ಲೊಮೋ ಪದವಿಯಲ್ಲಿ ಶೇ.70 ಅಂಕ ಪಡೆದಿರಬೇಕು. ಎಂಫಿಲ್. ಹಾಗೂ ಪಿಎಚ್.ಡಿ ಪದವಿ ಗಳಿಸಿದವರು ಹಾಗೂ ಯಾವುದೇ ವಿವಿಧ ರಂಗಗಳಲ್ಲಿ ಸಾಧನೆಗೈದವರು ತಮ್ಮ ಹೆಸರನ್ನು ಸಂಘದ ಗಮನಕ್ಕೆ ತರಬಹುದಾಗಿದೆ. ಆರ್ಥಿಕವಾಗಿ ಹಿಂದುಳಿದ ಸಮಾಜದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನಕ್ಕೆ ಅಂಕಗಳ ಮಿತಿ ಇರುವುದಿಲ್ಲ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ತಂದೆ-ತಾಯಿಯ ಆರ್ಥಿಕ ಸ್ಥಿತಿಯ ಬಗ್ಗೆ ಪೂರ್ಣ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ. ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವವರು  ಅರ್ಜಿಯನ್ನು ಸಂಬಂಧಪಟ್ಟ ಸಂಘದ ವಲಯದ ನಿರ್ದೇಶಕರ ಬಳಿ ಅಥವಾ ಸಂಘದ ಕಚೇರಿಗೆ ಸೆ.10ರ ಒಳಗೆ ಸಲ್ಲಿಸಬೇಕು. ಪ್ರತಿಭಾ ಪುರಸ್ಕಾರ ಸಮಾರಂಭ ಸೆ. 3ನೇ ವಾರದಲ್ಲಿ ನಡೆಯಲಿದೆ ಎಂದು ಸಂಘ ತಿಳಿಸಿದೆ. ಮಾಹಿತಿಗೆ- 948015718.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement