ನಾಳೆ ಪ್ರಾಣಿವಧೆ ನಿಷೇಧ
ಶಿವಮೊಗ್ಗ: ಆ. 28ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶಿವಮೊಗ್ಗ ನಗರಸಭಾ ವ್ಯಾಪ್ತಿಯ ಎಲ್ಲಾ ಬಗೆಯ ಕಸಾಯಿಖಾನೆಗಳಲ್ಲಿ ಪ್ರಾಣಿ ಹಿಂಸೆ ನಿಷೇಧಿಸಿರುವ ಪ್ರಯುಕ್ತ ಮಾಂಸ ಮಾರಾಟಗಾರರು ತಮ್ಮ ಕಸಾಯಿ ಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಂದು ಕಡ್ಡಾಯವಾಗಿ ಉದ್ದಿಮೆಯನ್ನು ಒಂದು ದಿನದ ಮಟ್ಟಿಗೆ ಮುಚ್ಚುವುದು ಮತ್ತು ಮಾಂಸ ಮಾರಾಟ ನಿಲ್ಲಿಸುವಂತೆ ನಗರಸಭಾ ಪೌರಾಯುಕ್ತರು ಆದೇಶಿಸಿದ್ದಾರೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ 2013-14ನೇ ಮೆಟ್ರಿಕ್ ನಂತರದ ಹಾಗೂ ಕಾಲೇಜು ತರಗತಿಗಳ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲು ಉದ್ದೇಶಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಗದು ಬಹುಮಾನ ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ವಿವರಗಳಿಗಾಗಿ ಅಂತರ್ಜಾಲ ತಾಣ ಢಿಢಿಢಿ.ಡಢಿ.್ಞಛ್ಠ.ಟ್ಝ್ಛಿ.್ಝಟಿ ವೀಕ್ಷಿಸುವಂತೆ ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.