ಪಡಿತರ ಆಹಾರ ಬಿಡುಗಡೆ
ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಆಗಸ್ ಮಾಹೆಯ ಪಡಿತರ ಆಹಾರ ಬಿಡುಗಡೆಯಾಗಿದೆ. ಕಾರ್ಡುದಾರರು ಆ. 31ರೊಳಗೆ ಆಹಾರ ಪಡೆಯುವಂತೆ ಶಿವಮೊಗ್ಗ ತಾಲೂಕು ತಹಸೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದಾಧಿಕಾರಿಗಳ ಪದಗ್ರಹಣ
ಸಾಗರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ರೈತರು, ಜನಸಾಮಾನ್ಯರು ಹಾಗೂ ಮಹಿಳೆಯರಲ್ಲಿ ಆರ್ಥಿಕ ಚೈತನ್ಯವನ್ನು ತುಂಬುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ರತ್ನಾಕರ ಹೊನಗೋಡು ಹೇಳಿದರು.
ತಾಲೂಕಿನ ಆನಂದಪುರಂ ರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಆನಂದಪುರಂ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯೋಜನೆ ಅನುಷ್ಠಾನಕ್ಕೆ ಬಂದ ಮೇಲೆ ಗ್ರಾಮಾಂತರ ಪ್ರದೇಶದ ಜನರು ಆರ್ಥಿಕವಾಗಿ ಸಶಕ್ತರಾಗಿದ್ದಾರೆ. ಅವರಲ್ಲಿ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುವ ಶಕ್ತಿ ಬೆಳೆದಿದೆ ಎಂದರು.
ಆನಂದಪುರಂ ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಹಾಜರಿದ್ದರು.