ನೋಂದಣಿಗೆ ಅವಕಾಶ
ಶಿವಮೊಗ್ಗ: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಸಹಕಾರ ಸಂಘಗಳನ್ನು ಸಬಲೀಕರಣಗೊಳಿಸಲು 2 ಕೋಟಿ ಆರ್ಥಿಕ ನೆರವು ಯೋಜನೆಯನ್ನು ರೂಪಿಸಿದೆ.
ಈ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರನ್ನು ಹಾಗೂ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದವರನ್ನು ಸಹಕಾರ ಸಂಘಗಳಲ್ಲಿ ಸದಸ್ಯರುಗಳನ್ನಾಗಿ ನೇಮಕಗೊಳಿಸಲು ಅವಕಾಶವಿದ್ದು, ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಹಾಗೂ ಸಹಕಾರ ಸಂಘಗಳ ಮೂಲಕ ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.