ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಭೈರಪ್ಪಗೆ ಅಭಿನಂದನೆ

Lingaraj Badiger
Updated On : 30 Aug 2013, 11:09 am

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎಲ್. ಭೈರಪ್ಪ ಹಾಗೂ ಖಜಾಂಚಿಯಾಗಿ ಯೋಗಾನಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಎಲ್. ಭೈರಪ್ಪ ಅವರು 2005ರಿಂದಲೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ನೌಕರರ ಸಂಘಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.  ನೌಕರರ ಸಮಸ್ಯೆಗಳು ಹಾಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚಿಸಿ, ಪರಿಹಾರ ಕ್ರಮಗಳಿಗಾಗಿ ಪೂರಕವಾಗಿ ಸ್ಪಂದಿಸುತ್ತಾ ಬಂದಿದ್ದಾರೆ ಎಂದಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಹೊಳಲೂರಿನ ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಸೆ. 2ನೇ ವಾರದಿಂದ 30 ದಿನಗಳ ಮೊಬೈಲ್ ರಿಪೇರಿ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಜಿಲ್ಲೆಯ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು 18ರಿಂದ 45 ವರ್ಷ ವಯೋವುತಿಯೊಳಗಿನವರಾಗಿದ್ದು, ಸ್ವಯಂ ಉದ್ಯೋಗ ಮಾಡಲು ಉತ್ಸುಕರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ವಿವರಗಳಿಗಾಗಿ ದೂರವಾಣಿ ಸಂಖ್ಯೆ 08182-245721, 223328 ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement