ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಶಿಕ್ಷಣ ಸಾಲಮೇಳ ಉದ್ಘಾಟನೆ

Lingaraj Badiger
Updated On : 30 Aug 2013, 11:02 am

ಕ.ಪ್ರ.ವಾರ್ತೆ, ಶಿವಮೊಗ್ಗ, ಆ.29 ಆರ್ಥಿಕ ಸಮಸ್ಯೆ ಕಾರಣಗಳಿಂದ ಯಾರೂ ಶಿಕ್ಷಣ ಪಡೆಯುವಲ್ಲಿ ವಂಚಿತರಾಗಬಾರದು ಎಂಬ ಕಳಕಳಿಯಿಂದ ಶಿಕ್ಷಣ ಸಾಲ ಪ್ರಕ್ರಿಯೆ ಸರಳಗೊಂಡಿದೆ. ಇದನ್ನು ಎಲ್ಲಾ ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದು ವಿಜಯಾ ಬ್ಯಾಂಕ್ ವಿಭಾಗೀಯ ಪ್ರಬಂಧಕ ರಾಧಕೃಷ್ಣ ಶೆಟ್ಟಿ ಹೇಳಿದರು.
ಸಂಗೊಳ್ಳಿ ರಾಯಣ್ಣ ರಸ್ತೆಯ ವಿಜಯಾ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಶಿಕ್ಷಣ ಸಾಲ ಮೇಳದಲ್ಲಿ ಅವರು, ಶಿಕ್ಷಣ ಪಡೆಯಲು ಇಂದು ಆರ್ಥಿಕ ಸಮಸ್ಯೆ ಎದುರಾಗುತ್ತದೆ. ಇದರಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಸ್ಥಗಿತಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ವಿಜಯಾ ಬ್ಯಾಂಕ್ ಶಿಕ್ಷಣ ಸಾಲ ಮೇಳ ಹಮ್ಮಿಕೊಳ್ಳಲಾಗಿದೆ ಎಂದರು.
ಉತ್ತಮ ಅಧ್ಯಯನ: ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶ ಸರಿಯಾಗಿ ಬಳಸಿಕೊಂಡು ಚೆನ್ನಾಗಿ ವಿದ್ಯಾಭ್ಯಾಸ ಮಾಡಬೇಕು. ಒಳ್ಳೆಯ ಉದ್ಯೋಗ ಪಡೆದು, ಪೋಷಕರ ಜವಾಬ್ದಾರಿ ಕಡಿಮೆ ಮಾಡಬೇಕು ಎಂದ ಅವರು, ಪೋಷಕರು ಮತ್ತು ವಿದ್ಯಾರ್ಥಿಗಳು ಶಿಕ್ಷಣ ಸಾಲ ಯೋಜನೆಯ ಬಗ್ಗೆ ಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಬ್ಯಾಂಕ್ ತನ್ನ ಸಮಾಜಿಕ ಜವಾಬ್ದಾರಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ ನೀಡುತ್ತಿದೆ ಎಂದರು. ಶಿಕ್ಷಣ ಸಾಲ ಮೇಳದಲ್ಲಿ ಜಿಲ್ಲೆಯ 13 ಬ್ಯಾಂಕ್ ಶಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಾಲದ ದಾಖಲೆ ಪತ್ರ ಹಾಗೂ ಚೆಕ್ ವಿತರಿಸಲಾಯಿತು.
ಶಾಖೆ ಮುಖ್ಯಪ್ರಬಂಧಕ ಎಸ್.ಬಿ. ಪಾಟೀಲ್, ಸಹಾಯಕ ವ್ಯವಸ್ಥಾಪಕ ಸಂತೋಷ್ ಮೊದಲಾದವರು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement