ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಂಭಾಜಿ ಪ್ರತಿಕೃತಿ ದಹಿಸಿ ಪ್ರತಿಭಟನೆ

Lingaraj Badiger
Updated On : 5 Dec 2013, 10:41 am

ಶಿವಮೊಗ್ಗ: ಕರ್ನಾಟಕ ಸರ್ಕಾರದ ಶವಯಾತ್ರೆ ನಡೆಯುತ್ತೇವೆ ಎಂದು ಹೇಳಿಕೆ ನೀಡಿದ್ದ ಶಾಸಕ ಸಂಭಾಜಿ ಪಟೇಲ್ ಅವರ ವರ್ತನೆ ಖಂಡಿಸಿ ನಗರದ ಗೋಪಿ ವೃತ್ತದಲ್ಲಿ ಬುಧವಾರ ಕರ್ನಾಟರ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿ ಅಧಿವೇಶನದಲ್ಲಿ ಎಂಇಎಸ್ ಪಕ್ಷದ ಶಾಸಕರು ಕನ್ನಡ ವಿರೋಧಿ ಮಾತುಗಳನ್ನಾಡಿದ್ದಾರೆ. ಉದ್ಧಟತನದ ಹೇಳಿಕೆ ನೀಡಿದ್ದಾರೆ. ಇಂದು ದುಂಡಾವರ್ತನೆಯ ಪರಮಾವಧಿ. ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿ ಎಂಇಎಸ್ ಶಾಸಕ ಸಂಭಾಜಿ ಅವರ ಪ್ರತಿಕೃತಿ ದಹನ ಮಾಡಿದರು.
ಈ ಹಿಂದೆಯೂ ಎಂಇಎಸ್ ಶಾಸಕರು ಹಲವು ಬಾರಿ ಕನ್ನಡ ವಿರೋಧಿ ಹೇಳಿಕೆ ನೀಡಿ ಶಾಂತಿಭಂಗಕ್ಕೆ ಕಾರಣರಾಗಿದ್ದಾರೆ. ಇವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಲೇವಡಿ ಮಾಡಿದ್ದಾರೆ. ಇವರು ಅಧಿವೇಶನದಲ್ಲಿ ಮರಾಠಿಯಲ್ಲಿಯೇ ಮಾತನಾಡಿದಾಗ ಉಳಿದ ಶಾಸಕರು ಮೌನರಾಗಿ ಕುಳಿತಿದ್ದರು. ಮರಾಠಿಯಲ್ಲಿ ಪ್ರಮಾಣವಚನ ಸ್ವೀಕರಿಸಿದಾಗ ಸ್ಪೀಕರ್ ಅವರು ಇವರ ವಿರುದ್ಧ ಕ್ರಮ ಜರುಗಿದಿದ್ದರೆ ಇಂತಹ ಅವಘಡಗಳು ಸಂಭವಿಸುತ್ತಿರಲಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಿಧಾನಸೌಧದ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಸಂಘಟನೆಯ ಮುಖಂಡರಾದ ವೆಂಕಟೇಶ್, ಎಸ್. ಮಂಜುನಾಥ್, ಶೈಲೇಶ್, ವಿಜಯಕುಮಾರ್, ಸತೀಶ್ ಬಾಬು, ಕಿರಣ್ ಕುಮಾರ್ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement