ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಸ್ತೆ ಕಾಮಗಾರಿ ಪೂರ್ಣಕ್ಕೆ ಆಗ್ರಹ

Lingaraj Badiger
Updated On : 6 Dec 2013, 11:37 am

ಶಿವಮೊಗ್ಗ: ನಗರದ ಕೆಇಬಿ ವೃತ್ತದ ಬಳಿ ಇರುವ 100 ಅಡಿ ರಸ್ತೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಒತ್ತಾಯಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ರೈಲು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.
ರೇಲ್ವೆ ಇಲಾಖೆ ಮತ್ತು ಜಿಲ್ಲಾಡಳಿತದ ಸಮನ್ವಯದ ಕೊರತೆ ಹಾಗೂ ಅಸಹಕಾರದಿಂದ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಇತ್ತೀಚೆಗೆ ರೇಲ್ವೆ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಸಂಬಂಧವಾಗಿ ಮನವಿ ಮಾಡಲಾಗಿತ್ತು. ಸಚಿವರು ಬೇಡಿಕೆ ಈಡೇರಿಸುವ ಭರವಸೆಯನ್ನೂ ನೀಡಿದ್ದರು. ಆದರೆ, ಈ ಬಗ್ಗೆ ರೇಲ್ವೆ ಇಲಾಖೆಯಾಗಲಿ, ಜಿಲ್ಲಾಡಳಿತವಾಗಲಿ ಯಾವುದೇ ನಿರ್ಧಾರ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರತಿಭಟನಾಕಾರರು ದೂರಿದರು.
ರೈಲು ನಿಲ್ದಾಣದ ಮುಂಭಾಗದಲ್ಲಿರುವ ಇಲಾಖೆಗೆ ಸಂಬಂಧಿಸಿದ ಆಸ್ತಿಯಲ್ಲಿ ಹಾದುಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಗುಂಡಿಗಳು ಹೆಚ್ಚಾಗಿರುವುದರಿಂದ ವಾಹನಗಳ ಓಡಾಟ ಕಷ್ಟಕರವಾಗಿದೆ, ಹಲವು ಅಪಘಾತಗಳು ಕೂಡ ಸಂಭವಿಸಿವೆ. ಈ ಸಂಬಂಧವಾಗಿ ಇಲಾಖೆಯ ನಿರ್ಲಕ್ಷ್ಯದಿಂದ ಕಳೆದ ಐದಾರು ವರ್ಷಗಳಿಂದ ಅಭಿವೃದ್ಧಿ ಕಂಡಿಲ್ಲ. ಈ ರಸ್ತೆ ಓಡಾಡಲು ಯೋಗ್ಯವಾಗಿಲ್ಲ. ಮಳೆಗಾಲದಲ್ಲಿ ಈ ರಸ್ತೆಯ ಸ್ಥಿತಿ ತೀವ್ರವಾಗಿ ಹದಗೆಟ್ಟಿರುತ್ತದೆ. ಹಾಗಾಗಿ ಭಾರತೀಯ ರೇಲ್ವೆ ನೈರುತ್ಯ ವಿಭಾಗದ ಮುಖ್ಯ ವ್ಯವಸ್ಥಾಪಕರು ಸಂಬಂಧಿಸಿದ ಇಲಾಖೆಯೊಂದಿಗೆ ಈ ರಸ್ತೆ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಮಸ್ಯೆಗಳ ಕುರಿತು ಜಿಲ್ಲೆಯ ಸಂಸದರು, ಸಚಿವರು ಶಾಸಕರು ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ರೀತಿಯಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಕೆ.ವಿ. ವಸಂತ ಕುಮಾರ್, ಅಶೋಕ್ ಯಾದವ್ ಮತ್ತಿತರರು ಇದ್ದರು.
--
ಆಶಾ ಕಾರ್ಯಕರ್ತೆಗೆ ಪ್ರೋತ್ಸಾಹ ಧನ
ಸೊರಬ: ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ಚಿಕಿತ್ಸೆ ಪಡೆದುಕೊಳ್ಳಲು ಫಲಾನುಭವಿಗಳಿಗೆ ಸಹಕರಿಸಿದ ಸೊರಬ ತಾಲೂಕಿನ ಆಶಾ ಕಾರ್ಯಕರ್ತೆಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಗಿದೆ. ತಾಲೂಕು ಶಕುನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿಯಲ್ಲಿ ಬರುವ ಪರಿಶಿಷ್ಟ ಜಾತಿ, ಪಂಗಡದ ಬಿ.ಪಿ.ಎಲ್. ಫಲಾನುಭವಿಗಳಿಗೆ ವಿವಿಧ ಕಾಯಿಲೆಗಳ ಚಿಕಿತ್ಸೆಗೆ ನೆರವಾದ ಹಿನ್ನೆಲೆಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಸ್ಥಳೀಯ ಆಶಾ ಕಾರ್ಯಕರ್ತೆ ಶಿವಲೀಲಾ ಇವರಿಗೆ ವೈದಾಧಿಕಾರಿ ಡಾ. ಆಸೀಫ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಕಮಲಾ ಅವರು ಪ್ರೋತ್ಸಾಹಧನ ನೀಡಿ ಗೌರವಿಸಿದರು. ಡಾ. ಆಸೀಫ್ ಮಾತನಾಡಿದರು. ಕಿರಿಯ ಆರೋಗ್ಯ ಸಹಾಯಕ ಜಗದೀಶ್, ವಾಜಪೇಯಿ ಆರೋಗ್ಯಶ್ರೀ ಯೋಜನೆಯ ಆರೋಗ್ಯ ಮಿತ್ರ ಕೃಷ್ಣ ಉಪಸ್ಥಿತರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement