ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಜಿಲ್ಲಾ ಪ್ರವಾಸ
ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಡಿ.6ರಂದು ರಾತ್ರಿ 9.30ಕ್ಕೆ ತೀರ್ಥಹಳ್ಳಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಡಿ.7ರಂದು ಬೆಳಗ್ಗೆ 10.30ಕ್ಕೆ ತೀರ್ಥಹಳ್ಳಿ ಹೇಮಗಿರಿ ವಿವಿದೊದ್ದೇಶ ಸಹಕಾರಿ ಸಂಘದ ಬ್ಯಾಂಕಿನ ಉದ್ಘಾಟನಾ ಸಮಾರಂಭ, ಬೆಳಗ್ಗೆ 11.30ಕ್ಕೆ ಬೋಬ್ಬಿ, ಹಿಂಡುವಳ್ಳಿ ಶಾಲೆಯ ಜಂಟಿ ಅರಣ್ಯ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ವಿತರಣಾ ಕಾರ್ಯ, ಸಂಜೆ 4 ಗಂಟೆಗೆ ಡಾ. ಬಿ.ಎಸ್. ಗಂಗಪ್ಪನವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಡಿ.9ರಂದು ಬೆಳಗ್ಗೆ 9.30ಕ್ಕೆ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 11ಗಂಟೆಗೆ ಆರಗ ಕುಡಿಯುವ ನೀರು ಉದ್ಘಾಟನಾ ಕಾರ್ಯಕ್ರಮದಲ್ಲಿ, ಮಧ್ಯಾಹ್ನ 3 ಗಂಟೆಗೆ ಉಳ್ಳೂರು ಸರ್ಕಾರಿ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸುವರು.
ಡಿ.10ರಂದು ಬೆಳಗ್ಗೆ 10 ಗಂಟೆಗೆ ತೀರ್ಥಹಳ್ಳಿಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 3 ಗಂಟೆಗೆ ತ್ರಿಯಂಬಕಾಪುರ ಗ್ರಾಮ ಪಂಚಾಯತ್ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ಶಿವಮೊಗ್ಗದಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿ ಸಮಾರಂಭದಲ್ಲಿ ಭಾಗವಹಿಸಿ, ರಾತ್ರಿ 11 ಗಂಟೆಗೆ ಬೆಂಗಳೂರಿಗೆ ತೆರಳುವರು.