ಇಂದು ಪ್ರತಿಭಟನಾ ಮೆರವಣಿಗೆ
ಶಿವಮೊಗ್ಗ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಡಿ.12ರಂದು ದೆಹಲಿಯಲ್ಲಿ ಪಾರ್ಲಿಮೆಂಟ್ ಚಲೋ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಇದರಿಂದ ಕೈಗಾರಿಕೆಗಳು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ದುಡಿಯುವ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಈ ಸಂಬಂಧ ದೇಶಾದ್ಯಂತ 5 ಲಕ್ಷಕ್ಕೂ ಅಧಿಕ ಕಾರ್ಮಿಕರು ದೆಹಲಿಯಲ್ಲಿ ಪಾಲ್ಗೊಳ್ಳುವರು. ಈ ಹಿನ್ನೆಲೆಯಲ್ಲಿ ನಗರದ ಸೈನ್ಸ್ ಮೈದಾನದಿಂದ ಬೃಹತ್ ಕಾರ್ಮಿಕರ ಮೆರವಣಿಗೆ ಹೊರಟು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಗುವುದು.