ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಿಎಂ ಸಿದ್ದರಾಮಯ್ಯ ಗುಜರಾತ್‌ಗೆ ಹೋಗಿ ಬರಲಿ

Lingaraj Badiger
Updated On : 12 Dec 2013, 10:44 am

ಶಿವಮೊಗ್ಗ: ಸಿದ್ದರಾಮಯ್ಯ ಅವರು ಗುಜರಾತ್‌ಗೆ ಹೋಗಿಬರಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ ನೀಡಿದರು.
ಬುಧವಾರ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಟೀಕಿಸುವ ಮುನ್ನ ಸಿದ್ದರಾಮಯ್ಯನವರು ಗುಜರಾತ್‌ಗೆ ಭೇಟಿ ಕೊಟ್ಟು ಅಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯ ಗಮನಿಸಲಿ ಎಂದು ಹೇಳಿದರು.
ಮೋದಿಯವರನ್ನು ನರಹಂತಕ ಎಂಬಿತ್ಯಾದಿ ಟೀಕೆ ಮಾಡುವ ಮುನ್ನ ಅವರ ಅಭಿವೃದ್ಧಿ ಕಾರ್ಯವನ್ನು ವೀಕ್ಷಿಸಬೇಕು ಎಂದ ಅವರು, ಸತತ 3 ಅವಧಿಗೆ ಮುಖ್ಯಮಂತ್ರಿಯಾಗಿರುವ ನರೇಂದ್ರ ಮೋದಿಯವರು ಗುಜರಾತ್‌ನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಗುಜರಾತ್ ಬೆಳವಣಿಗೆಯಾಗಿದೆ. ಎಲ್ಲಾ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಸಿಗುತ್ತಿದೆ. ದಿನ 24 ಗಂಟೆ ವಿದ್ಯುತ್ ಸರಬರಾಜಾಗುತ್ತಿದೆ, ಕೈಗಾರಿಕೆಗಳು ಬೆಳವಣಿಗೆಯಾಗಿವೆ ಎಂದರು.
ಗುಜರಾತ್‌ಗೆ ಹೋಲಿಸಿದರೆ ಕರ್ನಾಟಕ ಅಭಿವೃದ್ಧಿಯಾಗಿಲ್ಲ. ಇಲ್ಲಿನ ಮುಖ್ಯಮಂತ್ರಿ ಅಕ್ಕಿ ಕೊಡುತ್ತಾರೆ. ಈ ಮೂಲಕ ಕಾಳ ಸಂತೆಕೋರರಿಗೆ ಅನುಕೂಲ ಮಾಡುತ್ತಾರೆ ಎಂದು ಟೀಕಿಸಿದ ಈಶ್ವರಪ್ಪ, ರಾಜ್ಯ ಸರ್ಕಾರವೇ ರೈತರಿಗೆ ಮೋಸ ಮಾಡುತ್ತಿದೆ. ರೈತ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸಾಲು ಸಾಲು ರೈತರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರವನ್ನು ಟೀಕಿಸಿದರು.
ಗುಜರಾತ್‌ನಲ್ಲಿ ಮೂರು ಬಾರಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಲು ಅಲ್ಲಿನ ರೈತರು ಕಾರಣ. ಇದನ್ನು ರಾಜ್ಯದ ರೈತ ಸಮುದಾಯ ಅರಿತುಕೊಳ್ಳಬೇಕು. ಮೋದಿ ಪ್ರಧಾನಿಯಾಗಲು ಸಹಕಾರ ನೀಡಬೇಕು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 22 ಕ್ಷೇತ್ರಗಳಲ್ಲಾದರೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವಂತಾಗಬೇಕು, ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement