15ರಂದು ಕೆಳದಿ ಉತ್ಸವ
ಶಿವಮೊಗ್ಗ: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಳದಿ ಉತ್ಸವ ಆಚರಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಡಿ. 15ರಂದು ಬೆಳಗ್ಗೆ 10.30ಕ್ಕೆ ಸಾಗರ ತಾಲೂಕು ಕೆಳದಿಯ ಕೆಳದಿ ರಾಣಿ ಚೆನ್ನಮ್ಮಾಜಿ ವೇದಿಕೆಯಲ್ಲಿ ಕೆಳದಿ ಉತ್ಸವ ಏರ್ಪಡಿಸಿದೆ. ವಿಧಾನ ಪರಿಷತ್ ಸಭಾಧ್ಯಕ್ಷ ಡಿ.ಎಚ್. ಶಂಕರಮೂರ್ತಿಯವರು ಕಾರ್ಯಕ್ರಮ ಉದ್ಘಾಟಿಸುವರು. ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ವಸ್ತುಪ್ರದರ್ಶನ ಉದ್ಘಾಟಿಸುವರು. ಸಚಿವ ಕಿಮ್ಮನೆ ರತ್ನಾಕರ್ ಅವರು ನಾಣ್ಯ ಹಾಗೂ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸುವರು. ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಉಪಸ್ಥಿತರಿರುವರು. 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಡಾ. ನಾ. ಡಿಸೋಜ ಇವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಯಡಿಯೂರಪ್ಪ, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್, ವಿರೋಧ ಪಕ್ಷದ ಮುಖ್ಯ ಸಚೇತಕ ಮಧು ಬಂಗಾರಪ್ಪ ಸೇರಿದಂತೆ ಜಿಲ್ಲೆಯ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು. ಸಭಾ ಕಾರ್ಯಕ್ರಮಕ್ಕೆ ಮುನ್ನ 8.30ರಿಂದ ಕೆಳದಿಯ ಚೌಡಪ್ಪ ನಾಯಕನ ಮಹಾದ್ವಾರದಿಂದ ಉತ್ಸವದ ಮೆರವಣಿಗೆ ಹೊರಡಲಿದೆ.