ಒಡೆಯರ್ಗೆ ಶ್ರದ್ಧಾಂಜಲಿ
ಜೋಗ್ಫಾಲ್ಸ್: ಮೈಸೂರು ಸಂಸ್ಥಾನಕ್ಕೂ ಜಗದ್ವಿಖ್ಯಾತ ಜೋಗ ಜಲಪಾತಕ್ಕೂ, ಶರಾವತಿ ಯೋಜನೆಗೂ ಬಿಡಿಸಲಾರದ ಅವಿನಾಭಾವ ಸಂಬಂಧದ ಬೆಸುಗೆ ಇದೆ ಎಂಬುದಾಗಿ ಮುಖ್ಯ ಅಭಿಯಂತರ ಜಿ. ಹನುಮಂತಪ್ಪ ತಿಳಿಸಿದರು. ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಿಂದ ಒಡೆಯರ್ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ, ಶರಾವತಿ ವಿದ್ಯುತ್ ಉತ್ಪಾದನೆಯ ಯೋಜನೆಗೆ ಅಡಿಗಲ್ಲನ್ನು ಹಾಕಿ ಅದನ್ನು ಯಶಸ್ವಿಗೊಳಿಸಿ ರಾಜ್ಯಕ್ಕೆ ಬೆಳಕನ್ನು ನೀಡಿ, ಲಕ್ಷಾಂತರ ಜನತೆಗೆ ಅನ್ನಕ್ಕೆ ದಾರಿ ಮಾಡಿಕೊಟ್ಟ ಮೈಸೂರು ಸಂಸ್ಥಾನದ ಒಡೆಯರ್ ಅವರ ಸೇವೆ ಅವಿಸ್ಮರಣೀಯ. ಮೈಸೂರು ಸಂಸ್ಥಾನದ ಶ್ರೀಕಂಠದತ್ತ ಒಡೆಯರ್ ಅವರ ನಿಧನಕ್ಕೆ ನಿಗಮ ಶ್ರದ್ಧಾಂಜಲಿ ಅರ್ಪಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಿಂದ ಒಡೆಯರ್ ನಿಧನಕ್ಕೆ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಫಲಪುಷ್ಪ ಪ್ರದರ್ಶನ
ಶಿವಮೊಗ್ಗ: ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘ ಮತ್ತು ಆತ್ಮ ಯೋಜನೆ ಆಶ್ರಯದಲ್ಲಿ ಡಿ. 14ರಂದು ಬೆಳಗ್ಗೆ 10.30 ಶಿವಮೊಗ್ಗ ಮಹಾತ್ಮ ಗಾಂಧಿ ಪಾರ್ಕ್ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ವಿಧಾನ ಪರಿಷತ್ ಸಭಾಧ್ಯಕ್ಷ ಡಿ.ಎಚ್. ಶಂಕರಮೂರ್ತಿ ಹಾಗೂ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಪ್ರದರ್ಶನ ಉದ್ಘಾಟಿಸುವರು. ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್ ಇಲಾಖೆ ಮಳಿಗೆ ಉದ್ಘಾಟಿಸುವರು. ಪ್ರದರ್ಶನ ಮಳಿಗೆಗಳನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸುವರು. ಸ್ವಸಹಾಯ ಸಂಘಗಳ ಮಳಿಗೆಗಳ ಉದ್ಘಾಟನೆಯನ್ನು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ನೆರವೇರಿಸುವರು. ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯಾನಾಯ್ಕ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್. ಯಡಿಯೂರಪ್ಪ, ಮುಖ್ಯ ಸಚೇತಕ ಮಧು ಬಂಗಾರಪ್ಪ ಸೇರಿದಂತೆ ಜಿಲ್ಲೆಯ ಶಾಸಕರು, ಸ್ಥಳೀಯ ಜನ ಪ್ರತಿನಿಧಿಗಳು, ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಸಾರಿಗೆ ಅದಾಲತ್
ಶಿವಮೊಗ್ಗ: ಸಾರಿಗೆ ಇಲಾಖೆಯು ಡಿ. 19ರಂದು ಮಧ್ಯಾಹ್ನ 3ಗಂಟೆಯಿಂದ ಸಾಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಸಾರಿಗೆ ಅದಾಲತ್ ಏರ್ಪಡಿಸಿದೆ. ಈ ಅದಾಲತ್ನಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಮಾಲೀಕರು ತಮ್ಮ ಅಹವಾಲು ಸಲ್ಲಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ.