ಮಹಿಳೆಯರ ಸಂರಕ್ಷಣೆ ಕುರಿತ ಜಾಗೃತಿ
ಶಿವಮೊಗ್ಗ: ಅಪ್ನಾದೇಶ್ ಅಸೋಸಿಯೇಷನ್, ಭದ್ರಾವತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಆಶ್ರಯದಲ್ಲಿ ಬಿ.ಆರ್. ಪ್ರಾಜೆಕ್ಟ್ ನ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಸಭಾಂಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಅಧಿನಿಯಮ 2005 ಕುರಿತು ಹೋಬಳಿ ಮಟ್ಟದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ತಾಪಂ ಸದಸ್ಯ ಗಿರೀಶ್, ಮಹಿಳೆಯರಿಗೆ ಸಂಬಂಧಿಸಿದಂತೆ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಹಿಳೆಯರು, ಮಹಿಳಾ ಸಂಘ -ಸಂಸ್ಥೆಗಳು ಉಪಯೋಗಿಸಿಕೊಳ್ಳಬೇಕು. ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನೇಕ ಪರಿಹಾರೋಪಾಯ ದೊರೆಯಲಿವೆ. ಇದನ್ನು ಮಹಿಳೆಯರು ಅರಿತುಕೊಳ್ಳಬೇಕೆಂದರು. ವಕೀಲ ವಿಜಯ, ವಕೀಲೆ ಪ್ರಭಾ ರಾಘವೇಂದ್ರ ಮಾಹಿತಿ ನೀಡಿದರು.