ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಆರೋಗ್ಯಮಿತ್ರ ಯೋಜನೆ ಯಶಸ್ವಿಗೊಳಿಸಲು ಕರೆ

Rashmi Kasaragodu
Updated On : 14 Dec 2013, 10:28 am

ಸಾಗರ: ಆರೋಗ್ಯಮಿತ್ರ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ನೀಡಿ ಹೆಚ್ಚು ಜನರು ಇದರ ಉಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಗಂಭೀರ ಕ್ರಮ ತೆಗೆದುಕೊಳ್ಳಲು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸೂಚಿಸಿದರು.
ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆರೋಗ್ಯಮಿತ್ರ ಯೋಜನೆಯಡಿ ಸರ್ಕಾರ ಹೆಸರಾಂತ ಆಸ್ಪತ್ರೆಯಲ್ಲಿ 1.50 ಲಕ್ಷದವರೆಗೂ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಆದರೆ, ಇದರ ಸೌಲಭ್ಯ ಪಡೆಯುವವರ ಸಂಖ್ಯೆ ಕಡಿಮೆ ಇದೆ. ಆಶಾ ಕಾರ್ಯಕರ್ತೆಯರು, ಹಾಗೂ ಆರೋಗ್ಯ ಕಾರ್ಯಕರ್ತೆಯರ ಮೂಲಕ ಜನರಿಗೆ ಮಾಹಿತಿ ತಲುಪಿಸುವ ಕೆಲಸವಾಗಬೇಕು ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ ಅವರು, ಆಧುನಿಕ ಎಕ್ಸರೆ ಯಂತ್ರ ಅಳವಡಿಕೆ ಹಾಗೂ ಡ್ರೈಯರ್ ಹಾಗೂ ವಾಷಿಂಗ್, ಮಿಷನ್ ಖರೀದಿಸಲು ಸೂಚನೆ ನೀಡಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಈಗಾಗಲೆ ಗುತ್ತಿಗೆ ಆಧಾರದ ಮೇಲೆ ಸೆಕ್ಯುರಿಟಿ ಗಾರ್ಡ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದರ ಜೊತೆ ಮಹಿಳಾ ಸೆಕ್ಯೂರಿಟಿ ಗಾರ್ಡ್ ಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆಸಬೇಕು ಎಂದರು.
ಆಸ್ಪತ್ರೆಯಲ್ಲಿ ರಕ್ತನಿಧಿ ಕೇಂದ್ರ ಪ್ರಾರಂಭಿಸಬೇಕು ಎನ್ನುವ ಒತ್ತಾಯ ಸಾರ್ವಜನಿಕರಿಂದ ಕೇಳಿ ಬಂದಿದೆ ಎಂದರು.    
ಸಿವಿಲ್ ಸರ್ಜನ್ ಡಾ.ಬಿ.ಜಿ. ಸಂಗಂ, ಡಾ. ಪ್ರಕಾಶ್ ಬೋಸ್ಲೆ, ತಾಲೂಕು ವೈದ್ಯಾಧಿಕಾರಿ ಡಾ.ಕೆ.ಪಿ. ಅಚ್ಚುತ್, ಡಾ. ಶ್ರೀನಿವಾಸ್, ಉಪವಿಭಾಗಾಧಿಕಾರಿ ಡಾ. ಉದಯಕುಮಾರ ಶೆಟ್ಟಿ, ಡಿವೈಎಸ್ಪಿ ಸುರೇಶ್, ಆರೋಗ್ಯ ರಕ್ಷಾ ಸಮಿತಿಯ ಜಯರಾಮ, ನಟರಾಜ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement