ಕಾಮಗಾರಿ ತ್ವರಿತಗೊಳಿಸಲು ಸೂಚನೆ
ಕ.ಪ್ರ.ವಾರ್ತೆ, ಶಿಕಾರಿಪುರ, ಡಿ.17
ಪಟ್ಟಣದ ಹೊರಭಾಗದಲ್ಲಿ ವೇಗದಲ್ಲಿ ಕರ್ನಾಟಕ ವಸತಿ ನಿಗಮದ ವತಿಯಿಂದ ನಡೆಯುತ್ತಿರುವ ನಿವೇಶನ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ ಅವರು ನೇರವಾಗಿ ಪಟ್ಟಣದ ಸ.ಪ್ರ.ದ. ಕಾಲೇಜಿನಲ್ಲಿ ಅಂತಿಮ ಹಂತದಲ್ಲಿರುವ ಆಡಿಟೋರಿಯಂ ಕಾಮಗಾರಿ ವೀಕ್ಷಿಸಿ, ಕಾಲೇಜಿನ ಕುಂದುಕೊರತೆ ಬಗ್ಗೆ ಮಾಹಿತಿ ಪಡೆದರು.
ತ್ವರಿತವಾಗಿ ಪೂರ್ಣಗೊಳಿಸಿ: ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗುಣಮಟ್ಟ ಕಾಪಾಡಿಕೊಂಡು ಜನತೆಗೆ ವಾಸಿಸಲು ಯೋಗ್ಯ ಸ್ಥಳವಾಗಿರುವ ನಿವೇಶನ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಆಪ್ತ ಸಹಾಯಕ ಗುರುಮೂರ್ತಿ, ಕಾಡಾ ಮಾಜಿ ಅಧ್ಯಕ್ಷ ಶೇಖರಪ್ಪ, ತಹಸೀಲ್ದಾರ್ ಧರ್ಮೋಜಿರಾವ್, ತಾಪಂ ಇಒ ಡಾ. ಚಂದ್ರಶೇಖರ್, ಲೋಕೋಪಯೋಗಿ ಇಲಾಖೆ ಎಇಇ ರಮೇಶ್, ಸಹಾಯಕ ಕೃಷಿ ನಿರ್ದೇಶಕ ಡಾ. ಪ್ರಭಾಕರ್ ಮೊದಲಾದವರು ಹಾಜರಿದ್ದರು.