ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಿಕಲಚೇತನ ಮಕ್ಕಳ ಕ್ರೀಡಾಕೂಟ

Lingaraj Badiger
Updated On : 18 Dec 2013, 11:00 am

ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ ಡಿ.18ರಂದು ಬೆಳಗ್ಗೆ 10 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಪ್ರಸಕ್ತ ಸಾಲಿನ 14 ಮತ್ತು 17ವರ್ಷ ವಯೋವುತಿಯೊಳಗಿನ ವಿಕಲಚೇತನ ಶಾಲಾಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಈ ಪಂದ್ಯಾವಳಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 300ಕ್ಕೂ ಹೆಚ್ಚಿನ ವಿಕಲಚೇತನ ಸ್ಪರ್ಧಾಳುಗಳು ಹಾಗೂ ಅವರ ಸಹಾಯಕರು ಆಗಮಿಸಲಿದ್ದಾರೆ.  
ಕ್ರೀಡೆಗಳ ವ್ಯವಸ್ಥಿತ ನಿರ್ವಹಣೆಗಾಗಿ 40 ದೈಹಿಕ ಶಿಕ್ಷಣ ಶಿಕ್ಷಕರು ತಂಡದ ಮೇಲ್ವಿಚಾರಕರಾಗಿ ಹಾಗೂ ಕ್ರೀಡಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.
ಸಾರ್ವಜನಿಕರು ಈ ಕ್ರೀಡಾಕೂಟಕ್ಕೆ ಆಗಮಿಸಿ ಕ್ರೀಡಾಳುಗಳನ್ನು ಪ್ರೋತ್ಸಾಹಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement