ಪ್ರಮೋದ್ ಮಳ್ಳಿಗಟ್ಟಿ ನಿಧನ
ಶಿವಮೊಗ್ಗ: ದಿ ಹಿಂದೂ ಪತ್ರಿಕೆಯ ವರದಿಗಾರರಾಗಿ ನಿವೃತ್ತರಾಗಿದ್ದ ಹಿರಿಯ ಪತ್ರಕರ್ತ ಪ್ರಮೋದ್ ಮಳ್ಳಿಗಟ್ಟಿ ಅವರು ಶುಕ್ರವಾರ ತಡರಾತ್ರಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿದ್ದು, ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಹಲವು ದಶಕದಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಇವರು, ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ಇತ್ತೀಚೆಗೆ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶುಕ್ರವಾರ ರಾತ್ರಿ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಇವರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಶಿವಮೊಗ್ಗದಲ್ಲಿ ನಡೆಯಲಿದೆ. ಇವರ ನಿಧನಕ್ಕೆ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಪತ್ರಿಕಾ ಸಂಸ್ಥೆಗಳು ಸಂತಾಪ ಸೂಚಿಸಿವೆ.