ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಾಜ್ಯಮಟ್ಟದ ಶಿಕ್ಷಣ ಜಾಥಾ

Lingaraj Badiger
Updated On : 21 Dec 2013, 11:18 am

ಶೃಂಗೇರಿ: ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರ, ಜೆಸಿಐ, ಭಾರತ್ ವಿಕಾಸ್ ಪರಿಷತ್, ರೋಟರಿ ಕ್ಲಬ್ ಸಹಯೋಗದೊಂದಿಗೆ ಭಾನುವಾರ ಪಟ್ಟಣದ ಶ್ರೀ ಆದಿಚುಂಚನಗಿರಿ ಸಮುದಾಯಭವನದಲ್ಲಿ ರಾಜ್ಯಮಟ್ಟದ ಜನಜಾಗೃತಿ ಜಾಥಾ ಹಾಗೂ ಶೈಕ್ಷಣಿಕ ಸಾಂಸ್ಕೃತಿಕ ಚಿತ್ರಕಲಾ ದಾಖಲೆ ಪ್ರದರ್ಶನ ಹಬ್ಬ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ ರಾತ್ರಿ 8 ರವರೆಗೆ ಎರಡು ಹಂತಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಎಚ್ಡಿಕೆ ಜನ್ಮದಿನ: ಹಣ್ಣು ವಿತರಣೆ
ಬೀರೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ 55ನೇ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪತ್ರೆ ಕೆ.ಚನ್ನವೀರಪ್ಪಯ್ಯ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ವಿತರಿಸಿ ಸಂಭ್ರಮ ಆಚರಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಎಚ್. ಉಮೇಶ್, ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಬಡ ವರ್ಗದವರ ಕಾಳಜಿ ಅರಿತು ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಅಧಿಕಾರಾವಧಿಯಲ್ಲಿ ವಿವಿಧ ಯೋಜನೆ ಜಾರಿಗೊಳಿಸುವ ಮೂಲಕ ನೆರವು ನೀಡಿ ವಿಕಲಚೇತನರು, ವೃದ್ಧರು ಹಾಗೂ ರೋಗಿಗಳಿಗೆ ನೆರವಾಗಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement