ಶಿವಮೊಗ್ಗಕ್ಕೆ ಪಾಲಿಕೆ ಗರಿ
ಬೆಂಗಳೂರು: ತುಮಕೂರು, ಬಿಜಾಪುರ ಹಾಗೂ ಶಿವಮೊಗ್ಗ ನಗರಸಭೆಗಳನ್ನು ಮಹಾ ನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ ಸಂಬಂಧ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಶುಕ್ರವಾರ ರಾತ್ರಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರು ಅಂಕಿತ ಹಾಕಿದ್ದಾರೆ. ಜನಸಂಖ್ಯೆ ಆಧಾರದ ಮೇಲೆ ಈ ಮೂರು ನಗರಸಭೆಗಳನ್ನು ನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿತ್ತು.
ಹೂವಿನ ಕುಂಡ ಮಾರಾಟ
ಶಿವಮೊಗ್ಗ: ತೋಟಗಾರಿಕೆ ಇಲಾಖೆ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನದಲ್ಲಿ ಪ್ರದರ್ಶಿಸಿದ ಹೂವಿನ ಕುಂಡಗಳು ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಲು ಉದ್ದೇಶಿಸಿದೆ. ಹೂವಿನ ಕುಂಡಗಳನ್ನು ಖರೀದಿಸಲು ಇಚ್ಚಿಸುವ ಸಾರ್ವಜನಿಕರು ಹಿರಿಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು. ಮೊ. ಸಂ. 9900046126 ನ್ನು ಸಂಪರ್ಕಿಸಬಹುದಾಗಿದೆ.
ಉದ್ಯೋಗ ಮೇಳ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಮತ್ತು ಬೆಂಗಳೂರಿನ ಗ್ರೀಟ್ ಟೆಕ್ನಾಲಜೀಸ್ ಅವರ ಸಂಯುಕ್ತ ಆಶ್ರಯದಲ್ಲಿ ಅಕೌಂಟ್ ಪ್ರೊಸೆಸ್ ಎಕ್ಸಿಕ್ಯುಟಿವ್ ಹುದ್ದೆಗಳ ಭರ್ತಿಗಾಗಿ ಡಿ. 21ರಂದು ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬಿಕಾಂ, ಬಿಬಿಎಂ, ಎಂಕಾಂ, ಎಂಬಿಎ, ಪದವಿಯಲ್ಲಿ ಶೇ.60 ಅಂಕಗಳೊಂದಿಗೆ ಉತ್ತೀರ್ಣರಾದ 18ರಿಂದ 26ವರ್ಷ ವಯೋವುತಿಯೊಳಗಿನ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರು. 13,202 ವೇತನ ನೀಡಲಾಗುವುದು. ವಿವರಗಳಿಗಾಗಿ ದೂ.ಸಂ. 08182-255293, ಮೊ. 9845297713ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಪೊಲೀಸ್ ಕ್ರೀಡಾಕೂಟ
ಶಿವಮೊಗ್ಗ: ಕರ್ನಾಟಕ ಪೊಲೀಸ್ ಇಲಾಖೆ ಡಿ. 26 ಮತ್ತು 27ರಂದು ಶಿವಮೊಗ್ಗದಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಆಯೋಜಿಸಿದೆ. ಈ ಕ್ರೀಡಾಕೂಟವನ್ನು ಡಿ. 26 ರಂದು ಬೆಳಗ್ಗೆ 9ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶರಶ್ಚಂದ್ರ ಬಿ. ಅಂಗಡಿ ಉದ್ಘಾಟಿಸುವರು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಚ್.ಎಂ. ನಂಜುಂಡಸ್ವಾಮಿ ಮುಖ್ಯ ಅತಿಥಿಯಾಗಿ ಆಗಮಿಸಲಿರುವರು. ಕ್ರೀಡಾಕೂಟ ಸಮಾರೋಪ ಡಿ. 27ರಂದು ಸಂಜೆ 4ಗಂಟೆಗೆ ನಡೆಯಲಿದೆ. ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಎಸ್. ಪರಶಿವಮೂರ್ತಿ, ಜಿಲ್ಲಾಧಿಕಾರಿ ವಿಫುಲ್ ಬನ್ಸಲ್ ಆಗಮಿಸಲಿರುವರು.