ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಶೈಕ್ಷಣಿಕ ವರ್ಷ ಆರಂಭದಲ್ಲೇ ಸೈಕಲ್, ಸಮವಸ್ತ್ರ ವಿತರಿಸಿ

Lingaraj Badiger
Updated On : 21 Dec 2013, 11:07 am

ಕ.ಪ್ರ.ವಾರ್ತೆ, ಸೊರಬ, ಡಿ. 20
ಪ್ರಸಕ್ತ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಆರ್ಥಿಕ ವರ್ಷ ಕಳೆದು ವಾರ್ಷಿಕ ಪರೀಕ್ಷೆಗಳು ಹತ್ತಿರವಾಗುತ್ತಿವೆ. ಈ ಸಂದರ್ಭದಲ್ಲಿ ಸೈಕಲ್ ಬಂದಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನುಕೂಲವಾಗುವುದಿಲ್ಲ ಎಂದು ಜೆಡಿಎಸ್ ಮುಖ್ಯ ಸಚೇತಕ ಮಧು ಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕಿನ ಕೋಟಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸೈಕಲ್ ಹಾಗೂ ಸಮವಸ್ತ್ರ ವಿತರಿಸಿದರೆ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಅನುಕೂಲವಾಗುತ್ತದೆ. ಶಾಲೆಗಳು ಪ್ರಾರಂಭವಾಗಿ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಸೈಕಲ್ ವಿತರಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವರು  ಗಮನಹರಿಸಿದರೆ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದರು.
ಶಿಕ್ಷಣ ಕ್ಷೇತ್ರದ ವ್ಯಾಪ್ತಿ ದೊಡ್ಡದಿದ್ದು, ತಂತ್ರಜ್ಞಾನದ ಬೆಳವಣಿಗೆಯಿಂದ ಹೊಸ ಹೊಸ ಆವಿಷ್ಕಾರಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಹೊಸ ಮಾದರಿಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಶಿಕ್ಷಣ ಬದಲಾದಂತೆ ಶಿಕ್ಷಕರೂ ಬದಲಾಗಬೇಕು. ವಿದ್ಯಾರ್ಥಿಗಳಿಗೆ ಬೇಕಾದ ಗುಣಮಟ್ಟದ ಹಾಗೂ ಹೊಸ ಆವಿಷ್ಕಾರಗಳ ಶಿಕ್ಷಣ ನೀಡಲು ತಾವೂ ಕೂಡಾ ಓದಿನ ಕಡೆಗೆ ಗಮನಹರಿಸಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ರವಿಕಿರಣ ವಹಿಸಿದ್ದರು. ತಾಪಂ ಅಧ್ಯಕ್ಷ ಎಚ್.ಎಂ. ಬಸವಲಿಂಗಪ್ಪ, ಉಪಾಧ್ಯಕ್ಷೆ ನೀಲಮ್ಮ ಸುರೇಶ್, ಸದಸ್ಯೆ ವಿಶಾಲ ದಯಾನಂದಗೌಡ, ಗ್ರಾಪಂ ಸದಸ್ಯರಾದ ಕಲಂದರ್ ಸಾಬ್, ಮಲ್ಲಿಕಾರ್ಜುನ, ಮಡ್ಡಿ ಶ್ರೀನಾಥ, ಮುಖಂಡರಾದ ಎನ್.ಕುಮಾರ್, ಎಂ.ಡಿ.ಶೇಖರ್, ಎಚ್.ಗಣಪತಿ, ಕೆ.ಪಿ.ರುದ್ರಗೌಡ, ರುದ್ರಪ್ಪ ಕಡ್ಲೇರ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement