ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪಾಟೀಲ್ ಪುಟ್ಟಪ್ಪಗೆ ಮಿಂಚು ಶ್ರೀನಿವಾಸ್ ಪ್ರಶಸ್ತಿ

Vishwanath S
Updated On : 25 Dec 2013, 12:29 pm

ಶಿವಮೊಗ್ಗ: ಸಾಕಾರ ಸಾಂಸ್ಕೃತಿಕ ಮತ್ತು ಮಾಧ್ಯಮ ಪ್ರತಿಷ್ಠಾನವು ನಗರದ ಹಿರಿಯ ಪತ್ರಕರ್ತ ದಿ. ಮಿಂಚು ಶ್ರೀನಿವಾಸ್ ಹೆಸರಿನಲ್ಲಿ ಪತ್ರಿಕಾ ಪ್ರಶಸ್ತಿ ಘೋಷಿಸಿದ್ದು, ಮೊದಲ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ, ನಾಡೋಜ ಪಾಟೀಲ್ ಪುಟ್ಟಪ್ಪ ಅವರಿಗೆ ನೀಡಲಾಗುವುದು.
ಪ್ರಶಸ್ತಿ ಪ್ರಧಾನ ಸಮಾರಂಭವು ಧಾರವಾಡದ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಡಿ. 29ರ ಸಂಜೆ 5 ಗಂಟೆಗೆ ನಡೆಯುವುದು ಎಂದು ಪತ್ರಕರ್ತ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಎನ್. ಮಂಜುನಾಥ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯ ಅತಿಥಿಗಳಾಗಿ ನೃತ್ಯ ಕಲಾವಿದೆ ವೈಜಯಂತಿ ಕಾಶಿ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಗಂಗಾಧರ ಭಾಗವಹಿಸುವರು. ಭಾರತೀಯ ಪತ್ರಕರ್ತರ ಒಕ್ಕೂಟದ ಉಪಾಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸುವರು ಎಂದರು. ಇದೇ ವೇಳೆ ರಮ್ಯಾ ಕಾಮತ್ ಅವರು ಬರೆದ ಕವನ ಸಂಕಲನ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸ್ವಾತಂತ್ರ್ಯ ಹೋರಾಟ, ನಂತರ ಕಾಗೋಡು ಹೋರಾಟ ಸೇರಿದಂತೆ ಹಲವು ಜನಪರ ಹೋರಾಟಗಳಲ್ಲಿ ಭಾಗವಹಿಸಿದ್ದ ಮಿಂಚು ಶ್ರೀನಿವಾಸ್ ಅವರು ಸಮಾಜವಾದಿ ಚಳವಳಿಯಲ್ಲಿ ಸಕ್ರೀಯವಾಗಿ ಪಾಲ್ಗೊಂಡವರು. 12 ವರ್ಷಗಳ ಕಾಲ ಮಿಂಚು ಪತ್ರಿಕೆ ನಡೆಸಿದ ಇವರು ಹರಿತ ಲೇಖನಗಳಿಂದ ಭ್ರಷ್ಟಾಚಾರದ ವಿರುದ್ಧ ಕಿಡಿಕಾರಿದ್ದರು. ಇವರ ಹೆಸರಿನಲ್ಲಿ ಜಿಲ್ಲೆಯಲ್ಲಿಯೂ ಪ್ರಶಸ್ತಿ ನೀಡುವ ಬಗ್ಗೆ ಕಾರ್ಯನಿರತ ಪತ್ರಕರ್ತರ ಸಂಘದೊಂದಿಗೆ ಚರ್ಚಿಸಲಾಗುವುದು ಎಂದು ಮಂಜುನಾಥ್ ಹೇಳಿದ್ದಾರೆ.
ಮಿಂಚು ಶ್ರೀನಿವಾಸ್ ಪುತ್ರ ರವಿಕುಮಾರ್, ಅಳಿಯ ಸುನೀಲ್ , ಮಗಳು ಜ್ಯೋತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement