ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

29ರಂದು ಡಿಸೋಜಗೆ ಪೌರ ಸನ್ಮಾನ

Lingaraj Badiger
Updated On : 26 Dec 2013, 11:36 am

ಸಾಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಗರಸಭೆ ಹಾಗೂ ವಿವಿಧ ಸಂಘಟನೆಗಳು ಡಿ. 29ರಂದು ಸಂಜೆ 4ಕ್ಕೆ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಡಾ. ನಾ.ಡಿಸೋಜ ಅವರಿಗೆ ಪೌರ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಡಿಸೋಜ ಅವರ ಕುರಿತು ಹಿರಿಯ ಪತ್ರಕರ್ತ ಅ.ರಾ. ಶ್ರೀನಿವಾಸ್ ಮಾತನಾಡಲಿದ್ದಾರೆ. ಉಪವಿಭಾಗಾಧಿಕಾರಿ ಡಾ. ಉದಯಕುಮಾರ ಶೆಟ್ಟಿ, ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ತಾಲೂಕು ಅಧ್ಯಕ್ಷ ವಿ.ಟಿ.ಸ್ವಾಮಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಕಳೆದ ಡಿ. 23ರಂದು ಆಯೋಜನೆಗೊಂಡಿದ್ದ ಪೌರಸನ್ಮಾನ ಕಾರ್ಯಕ್ರಮ ಜಿ.ಎಸ್. ಶಿವರುದ್ರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement