ಬಾಬಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಶಿವಮೊಗ್ಗ: ಯೋಗಗುರು ಬಾಬಾ ರಾಮ್ದೇವ್ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಕುರಿತು ಲಘುವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಗರ ಕಾಂಗ್ರೆಸ್ ಕಾರ್ಮಿಕ ವಿಭಾಗದ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಖಾಸಗಿ ಬಸ್ ನಿಲ್ದಾಣದಿಂದ ಗೋಪಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಬಾಬಾ ರಾಮ್ದೇವ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜಕಾರಣಿ ವರ್ತನೆ: ಯೋಗಗುರು ಬಾಬಾ ರಾಮ್ದೇವ್ ಮೊದಲು ತಾವು ಸಂತ- ಸನ್ಯಾಸಿಯೋ ಅಥವಾ ರಾಜಕಾರಣಿಯೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಸಾಧು ಸಂತರು ಜನರಿಗೆ ಆಧ್ಯಾತ್ಮದ ಬಗ್ಗೆ ಅರಿವು ಮೂಡಿಸುವ ಜೊತೆಗೆ ನಾಡಿನ ಸಂಸ್ಕೃತಿ ಉಳಿವಿನ ಬಗ್ಗೆ ತಿಳಿಸುವಂತಹ ಕಾರ್ಯ ಮಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಬಾಬಾ ರಾಮ್ದೇವ್ ಬಿಜೆಪಿ ಹಾಗೂ ನರೇಂದ್ರಮೋದಿಯ ಏಜೆಂಟರಂತೆ ಮತ್ತು ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.
ದೇವೇಂದ್ರಪ್ಪ, ರಮೇಶ್, ಮಧುಸೂದನ್, ಆರ್. ರಂಗನಾಥ್, ಆರಿಫ್ವುಲ್ಲಾ, ದೇವರಾಜ್, ಸತೀಶ್, ಮಹಮದ್ ಹನೀಫ್ ಮತ್ತಿತರರು ಪಾಲ್ಗೊಂಡಿದ್ದರು.
--