ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸೊರಬ ಅಭಿವೃದ್ಧಿಗೆ ಕುಮಾರ್ ಬಂಗಾರಪ್ಪ ಗೆಲವು ಅನಿವಾರ್ಯ

Lingaraj Badiger
Updated On : 28 Dec 2013, 10:57 am

ಸೊರಬ:  ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರಿಗೆ ಆಹ್ವಾನ ಬಂದಿತ್ತು. ಆದರೂ, ಪಕ್ಷದಲ್ಲಿದ್ದ ತಮ್ಮ ತಂದೆ ಎಸ್.ಬಂಗಾರಪ್ಪ ಹೆಸರು ಸೂಚಿಸುವ ಮೂಲಕ ಕುಮಾರ್ ದೊಡ್ಡತನ ಮೆರೆದ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮಂಜುನಾಥ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಕಳೆದ ಚುನಾವಣೆಗಳಲ್ಲಿ ಜನತೆ ತೆಗೆದುಕೊಂಡ ತಪ್ಪು ತೀರ್ಮಾನದಿಂದ 6 ವರ್ಷಗಳಿಂದ ತಾಲೂಕಿನ ಅಭಿವೃದ್ಧಿ ಕುಂಠಿತಗೊಂಡಿದೆ. ತಾಲೂಕಿನ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತೊಮ್ಮೆ ಕುಮಾರ್ ಬಂಗಾರಪ್ಪ ಅವರನ್ನು ಗೆಲ್ಲಿಸುವುದು ಅನಿವಾರ್ಯ. ಹಾಗಾಗಿ, ಮುಂಬರುವ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಪಕ್ಷ ಕುಮಾರ್ ಅವರಿಗೆ ಟಿಕೇಟ್ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಅಗಲಿದ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರಿಗೆ ತಾಲೂಕು ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭ ಪಪಂ ಸದಸ್ಯರಾದ ಎಂ.ಡಿ.ಉಮೇಶ್, ಸುಜಾಯತ್‌ವುಲ್ಲಾ, ಕಿಸಾನ್ ಸೆಲ್ ಘಟಕದ ಅಧ್ಯಕ್ಷ ನಿಟ್ಟಕ್ಕಿ ಜೀವಣ್ಣ, ಎಚ್.ಎಸ್. ಜಯಶೀಲಪ್ಪ, ಟಿ.ಆರ್. ಸುರೇಶ್, ಮಂಜುನಾಥ ಮಾಸ್ತರ್, ಬಲರಾಮಪ್ಪ, ರೇವಣಪ್ಪ, ಗೀತಾ ಚಂದ್ರಶೇಖರ್, ಮಂಜುಳಾ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement