ಇಂದು ಕಿಮ್ಮನೆ ರತ್ನಾಕರ್ ಪ್ರವಾಸ
ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಅವರು ಜನವರಿ 1ರಂದು ಸಂಜೆ 6ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ, 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ನಾ.ಡಿಸೋಜ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಜ.2ರಂದು ಮಧ್ಯಾಹ್ನ 12ಗಂಟೆಗೆ ತೀರ್ಥಹಳ್ಳಿಯಲ್ಲಿ ನಡೆಯಲಿರುವ ಶ್ರೀ ರಾಮೇಶ್ವರ ದೇವರ ಜಾತ್ರೋತ್ಸವದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದಲ್ಲಿ ನಡೆಯುವ ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜ.3ರಂದು ಬೆಳಿಗ್ಗೆ 10ಗಂಟೆಗೆ ತೀರ್ಥಹಳ್ಳಿಯ ಹೆಬ್ಬುರಳಿ ಗ್ರಾಮ ಪಂಚಾಯಿತಿಯ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2.30ಕ್ಕೆ ತೀರ್ಥಹಳ್ಳಿಯ ರಾಮೇಶ್ವರ ದೇವರ ತೆಪ್ಪೋತ್ಸವದಲ್ಲಿ ಭಾಗವಹಿಸುವರು. ಜ.5ರಂದು ಬೆಳಿಗ್ಗೆ 10ಗಂಟೆಗೆ ಹೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ, ಮಧ್ಯಾಹ್ನ 12.30ಕ್ಕೆ ಶೇಡ್ಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಲಿರುವ ಸಮಾರಂಭಗಳಲ್ಲಿ ಭಾಗವಹಿಸುವರು. ಸಂಜೆ 4ಗಂಟೆಗೆ ಸಿದ್ಧರಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. ಜ.6ರಂದು ಬೆಳಿಗ್ಗೆ 8ಗಂಟೆಗೆ ಬೈಂದೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.