ಶಿವಮೊಗ್ಗ

ಖೋಖೋ ಪಂದ್ಯಾವಳಿ ಉದ್ಘಾಟನೆ




ಶಿವಮೊಗ್ಗ: ಫ್ರೆಂಡ್ಸ್ ಕ್ರಿಯೇಷನ್ ಅಸೋಸಿಯೇಷನ್ ನೆಹರು ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಖೋಖೋ ಪಂದ್ಯಾವಳಿಯನ್ನು ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶುಕ್ರವಾರ ಉದ್ಘಾಟಿಸಿದರು.
 ನಂತರ ಮಾತನಾಡಿದ ಅವರು, ಖೋಖೋ ಕ್ರೀಡೆಯಲ್ಲಿ ಸೋಮಾರಿತನ ಎಂಬುದಿಲ್ಲ. ಇಲ್ಲಿ ಶಕ್ತಿ, ಮತ್ತು ಸಾಮರ್ಥ್ಯ ಇದ್ದವರು ಮಾತ್ರ ಗೆಲ್ಲಲು ಸಾಧ್ಯ. ಆಟ ಹಾಡುವುದರೊಂದಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚು ಆಸಕ್ತಿ ವಹಿಸಿದರೆ ಎಂಎಲ್‌ಎ, ಉಪಮುಖ್ಯಮಂತ್ರಿ ಆಗಬಹುದು. ಕ್ರೀಡೆಗಳ ಸರ್ವಾಂಗಿಣ ಅಭಿವೃದ್ಧಿಗೆ ಸರ್ಕಾರ ಸಹಕರಿಸುತ್ತದೆ. ಖೋಖೋ ಪಂದ್ಯದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ರಾಜ್ಯಕ್ಕೆ ಕೀರ್ತಿ ತರಬೇಕು ಎಂದರು.
 ಕಾರ್ಯಕ್ರಮದಲ್ಲಿ ಕಾಡ ಅಧ್ಯಕ್ಷ ಗಿರೀಶ್ ಪಟೇಲ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಎಂ.ಕೆ. ಬಲದೇವಕೃಷ್ಣ, ಜ್ಯೋತಿಪ್ರಕಾಶ್, ಅರುಣ್, ಪಂದ್ಯಾವಳಿ ಸಂಘಟನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!