ಶಿವಮೊಗ್ಗ

ಮಕ್ಕಳಿಗೆ ಪೌಷ್ಟಿಕ ಆಹಾರ ಅಗತ್ಯ




ಶಿವಮೊಗ್ಗ: ಮಕ್ಕಳು ಆರೋಗ್ಯವಂತರಾಗಿ ಬೆಳೆಯಬೇಕಾದರೆ ಉತ್ತಮ ಪೌಷ್ಟಿಕ ಆಹಾರ ಹಾಗೂ ಪರಿಸರ ಅಗತ್ಯ ಎಂದು ಸೊರಬ ತಾಲೂಕು ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಮ್ಮ ಅಭಿಪ್ರಾಯಪಟ್ಟರು.
ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕುಬಟೂರು ಗ್ರಾಮಪಂಚಾಯಿತಿ ಆಶ್ರಯದಲ್ಲಿ ಸೊರಬ ತಾಲೂಕು ಮಲ್ಲಾಪುರದಲ್ಲಿ ಹಮ್ಮಿಕೊಂಡಿದ್ದ ಮಗುವಿನ ಸರ್ವಾಂಗೀಣ ವಿಕಾಸಕ್ಕೆ ಪೌಷ್ಟಿಕ ಆಹಾರ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಮಕ್ಕಳು ಶಾರೀರಿಕವಾಗಿ ಅಲ್ಲದೆ ಬೌದ್ಧಿಕ, ಸಾಮಾಜಿಕವಾಗಿ ಬೆಳೆವಣಿಗೆಯಾಗಬೇಕು. ಇದಕ್ಕೆ ಮಕ್ಕಳು ಬೆಳೆಯುವ ವಾತಾವರಣ ಪರಿಶುದ್ಧವಾಗಿರುವುದು ಬಹಳ ಮುಖ್ಯ ಎಂದರು.
ಅಪೌಷ್ಟಿಕತೆ: ಕೆಲ ಸಾಮಾಜಿಕ ಕಾರಣ ಹಾಗೂ ಮೌಢ್ಯತೆಗಳಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಕಾಣಿಸಿಕೊಳ್ಳುತ್ತಿದೆ. ಇದನ್ನು ಮನಗಂಡು ಸರ್ಕಾರ ಅಪೌಷ್ಟಿಕತೆ ನಿವಾರಣೆಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಇದರ ಸದುಪಯೋಗಲನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮೀಕಾಂತಮ್ಮ ಮಾತನಾಡಿ, 6 ವರ್ಷದೊಳಗಿನ ಮಕ್ಕಳ ಬೆಳವಣಿಗೆಯಲ್ಲಿ ಕುಂಟಿತವಾಗಿದ್ದರೆ ತಕ್ಷಣ ಅಂತಹ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತರಿಗೆ ಅಥವಾ ವೈದ್ಯರಿಗೆ ತೋರಿಸಿ ಸೂಕ್ತ ಸಲಹೆ ಪಡೆಯಬೇಕು ಎಂದರು.
ಪ್ರತ್ಯೇಕ ಕಡತ: ಪೌಷ್ಟಿಕತೆ ಕೊರತೆಯುಳ್ಳ ಮಕ್ಕಳಿಗಾಗಿ ಅಂಗವಾಡಿಗಳಲ್ಲಿ ಪ್ರತ್ಯೇಕ ಕಡತಗಳನ್ನು ರೂಪಿಸಿ ಪೌಷ್ಟಿಕ ಆಹಾರವನ್ನು ಕೊಡಲಾಗುತ್ತಿದೆ. ಅಲ್ಲದೆ ಸೂಕ್ತ ವೈದ್ಯಕೀಯ ವೆಚ್ಚಗಳನ್ನು ಭರಿಸುವ ಯೋಜನೆಗಳಿದ್ದು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ
ನೀಡಿದರು.
ವೈದ್ಯಧಿಕಾರಿ ಡಾ. ಮಹಾಲಿಂಗಪ್ಪ ಅಪೌಷ್ಟಿಕತೆಯಿಂದ ಆಗುವ ತೊಂದರೆಗಳು, ಲಕ್ಷಣಗಳು ಹಾಗೂ ಪರಿಹಾರಗಳ ಕುರಿತು ಉಪನ್ಯಾಸ ನೀಡಿದರು.
ಕುಬಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಕುಮ್ಮೂರ, ಜಿಲ್ಲಾ ವಾರ್ತಾಧಿಕಾರಿ ಜಿ. ಹಿಮಂತರಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜೋಯಪ್ಪ, ಗ್ರಾ.ಪಂ.ಸದಸ್ಯೆ ಯಲ್ಲಮ್ಮ, ಸೊರಬ ತಾಲೂಕಿನ ಎಲ್ಲ ಅಂಗನಾವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರು, ಸ್ಥಳೀಯ ಮುಖಂಡರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!