ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದು ವಾಜಪೇಯಿ ಆರೋಗ್ಯಶ್ರೀ ಉದ್ಘಾಟನೆ

Mainashree
Updated On : 3 Feb 2013, 12:08 pm

ಶಿವಮೊಗ್ಗ: ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 3ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ವಾಜಪೇಯಿ ಆರೋಗ್ಯಶ್ರೀ ಉದ್ಘಾಟನಾ ಸಮಾರಂಭ ಏರ್ಪಡಿಸಿದೆ. ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿಯವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ ಕಾರ್ಯಕ್ರಮ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆ ವಹಿಸುವರು.
ಸಂಸದ ಬಿ.ವೈ. ರಾಘವೇಂದ್ರ, ಆಯನೂರು ಮಂಜುನಾಥ್, ಜಿಪಂ ಅಧ್ಯಕ್ಷೆ ಗೀತಾ ಬಿ. ಮಲ್ಲಿಕಾರ್ಜುನ, ನಗರಸಭಾಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ದತ್ತಾತ್ರಿ, ಜಿಪಂ ಉಪಾಧ್ಯಕ್ಷೆ ಹೇಮಾ ಪಾವನಿ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗಾಯತ್ರಿ ಷಣ್ಮುಖಪ್ಪ, ತಾಪಂ ಅಧ್ಯಕ್ಷೆ ದೇವಿಬಾಯಿ ಧರ್ಮಾನಾಯ್ಕ ಹಾಗೂ ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಪಾಲ್ಗೊಳ್ಳುವರು.
ಬೆಳಗ್ಗೆ 8ರಿಂದ ಸಂಜೆ 5ಗಂಟೆವರೆಗೆ ಎನ್.ಇ.ಎಸ್. ಕಾಲೇಜು ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement