ಶಿವಮೊಗ್ಗ

ಅರ್ಜಿಗಳ ವಿಲೇವಾರಿಗೆ ಕ್ರಮ

ಸಾಗರ: ಇಲ್ಲಿನ ನೂತನ ಉಪವಿಭಾಗಾಧಿಕಾರಿಯಾಗಿ ಡಾ. ಬಿ. ಉದಯಕುಮಾರ್ ಶೆಟ್ಟಿ ಸೋಮವಾರ ಅಧಿಕಾರ ವಹಿಸಿಕೊಂಡರು.
 ಮಂಗಳವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬಗರ್ ಹುಕುಂ ಅಕ್ರಮ ಸಕ್ರಮ ಸೇರಿದಂತೆ ಕಂದಾಯ ಇಲಾಖೆಯಲ್ಲಿ ವಿಲೇವಾರಿಯಾಗದೆ ಉಳಿದಿರುವ ಎಲ್ಲಾ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರಲ್ಲದೆ ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಹೆಚ್ಚು ನಿಗಾ ವಹಿಸಲಾಗುವುದು ಎಂದು ಹೇಳಿದರು.
ಹೆಚ್ಚುವರಿ ಕೌಂಟರ್: ಆಧಾರ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಪ್ರಧಾನ ಅಂಚೆ ಕಚೇರಿಯಲ್ಲಿ ಒಂದೇ ಕೌಂಟರ್ ಇದ್ದು, ಪ್ರತಿದಿನ 30 ರಿಂದ 40 ಜನರಿಗೆ ಮಾತ್ರ ಅರ್ಜಿ ವಿತರಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ, ಇದು ನನ್ನ ಗಮನಕ್ಕೂ ಬಂದಿದೆ. ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಹೆಚ್ಚುವರಿ ಕೌಂಟರ್ ತೆರೆಯುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
 ಪಹಣಿಯಲ್ಲಿ ಬೆಳೆ ದೃಢೀಕರಣ ನಮೂದಿಸದೇ ಇರುವ ಬಗ್ಗೆ ಕ್ರಮ ಜರುಗಿಸುವ ಜೊತೆಗೆ ಜೋಗ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚಿಸಿ, ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇದು ಚುನಾವಣೆ ವರ್ಷವಾಗಿರುವುದರಿಂದ ಶಾಂತಿ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವತ್ತ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!