ಕಾಂಗ್ರೆಸ್‌ನಿಂದ ಪ್ರತಿಭಟನೆ
ಸಾಗರ: ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ತಾಲೂಕು ಕಾಂಗ್ರೆಸ್ ವತಿಯಿಂದ ಗುರುವಾರ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಕೃಷಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಪರೀಕ್ಷೆ ಸಮಯ ಹತ್ತಿರ ಬರುತ್ತಿರುವುದರಿಂದ ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳು ಅಭ್ಯಾಸ ನಡೆಸಲು ತೊಂದರೆಯುಂಟಾಗಿದೆ. ರೈತರು ಬೆಳೆಗಳಿಗೆ ನೀರನ್ನು ಹಾಯಿಸುವುದನ್ನು ಕೈ ಬಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಜಿಪಂ ಹಾಗೂ ತಾಪಂ ಸಭೆಗಳಲ್ಲಿ ಟ್ರಾನ್ಸ್‌ಫಾರ್ಮರ್ ಪೂರೈಕೆ ಕುರಿತು ವ್ಯಾಪಕ ಚರ್ಚೆ ನಡೆದಿದೆ. ಆದರೆ ಮೆಸ್ಕಾಂ ಅಧಿಕಾರಿಗಳು ಮಾತ್ರ ಚುನಾಯಿತ ಪ್ರತಿನಿಧಿಗಳ ಮಾತಿಗೆ ಬೆಲೆ ಕೊಡುತ್ತಿಲ್ಲ.
ಅಧಿಕಾರಿಗಳು ಯಾರು ಹಣ ಕೊಡುತ್ತಾರೋ ಅವರ ಮನೆಬಾಗಿಲಿಗೆ ಟ್ರಾನ್ಸ್‌ಫಾರ್ಮರ್ ಅಳವಡಿಸುವ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ತ ಕ್ಷಣ ಇಲಾಖೆ ಲೋಡ್ ಶೆಡ್ಡಿಂಗ್ ಕೈಬಿಡಬೇಕು. ಜನರಿಗೆ ಸಮರ್ಪಕ ವಿದ್ಯುತ್ ನೀಡಲು ಕ್ರಮ ಕೈಗೊಳ್ಳಬೇಕು. ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.