ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ತಾಲೂಕು ಯುವಜನಮೇಳಕ್ಕೆ ಭರದ ಸಿದ್ಧತೆ

Parashurama
Updated On : 8 Feb 2013, 10:09 am

ತೀರ್ಥಹಳ್ಳಿ: ತಾಲೂಕು ಯುವಜನಮೇಳಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಫೆ.9ರಂದು ಕುಡುಮಲ್ಲಿಗೆಯಲ್ಲಿ ಈ ಸಾಲಿನ ಯುವಜನಮೇಳ ಹಮ್ಮಿಕೊಳ್ಳಲಾಗಿದೆ.
ತಾಲೂಕು ಮಟ್ಟದ ಯುವಜನಮೇಳ ಕುಡುಮಲ್ಲಿಗೆಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಫೆ.9 ಮತ್ತು  10ರಂದು ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ರಮೇಶ ಶೆಟ್ಟಿ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.    ರಾಜ್ಯಕ್ಕೆ ಮಾದರಿಯಾಗುವಂತೆ ಈ ಯುವಜನಮೇಳ ನಡೆಸಲಾಗುವುದು. ಸುಮಾರು ರು. 5 ಲಕ್ಷ ವೆಚ್ಚದಲ್ಲಿ   ಹಮ್ಮಿಕೊಳ್ಳಲಾಗುವ ಈ ಮೇಳಕ್ಕೆ ದಾನಿಗಳು ಕೈಜೋಡಿಸಿದ್ದಾರೆ ಎಂದು ಹೇಳಿದರು.      
  ದಾಖಲೆಯ ತಂಡಗಳು ಪಾಲ್ಗೊಳ್ಳಲಿವೆ. ಈ ಬಾರಿ 50ಕ್ಕೂ ಹೆಚ್ಚು ತಂಡಗಳು ಈ ಮೇಳದಲ್ಲಿ ಭಾಗವಹಿಸಲಿವೆ. ತಾಲೂಕಿನ ಯುವಕ, ಯುವತಿ ಮಂಡಳಿಗಳನ್ನು ಈಗಾಗಲೇ  ಸಂಪರ್ಕಿಸಲಾಗಿದೆ. ದಾಖಲೆಯ ಸಂಖ್ಯೆಯಲ್ಲಿ ಭಾಗವಹಿಸಲಿವೆ. ಭಾಗವಹಿಸುವ ತಂಡಗಳ ಪ್ರಯಾಣ ವೆಚ್ಚ ಭರಿಸಲಿದ್ದು ಯುವಜನ ಮೇಳ ನಡೆಯುವ ಜಾಗ ಮುಖ್ಯರಸ್ತೆಯ ಪಕ್ಕದಲ್ಲೇ ಇರುವುದರಿಂದ ಈ ಮೇಳಕ್ಕೆ ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.   
ಫೆ.9ರ ಶನಿವಾರ ಸಂಸದ ಬಿ.ವೈ. ರಾಘವೇಂದ್ರ ಯುವಜನಮೇಳ ಉದ್ಘಾಟಿಸಲಿರುವರು. ಶಾಸಕ ಕಿಮ್ಮನೆ ರತ್ನಾಕರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಚುನಾಯಿತ ಜನಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
  ಫೆ.10ರ ಭಾನುವಾರ ಸಮಾರೋಪ   ಸಮಾರಂಭ ನಡೆಯಲಿದೆ. ಎಂಪಿಎಂ ಅಧ್ಯಕ್ಷ ಆರಗ ಜ್ಞಾನೇಂದ್ರ ಸಮಾರೋಪ ಭಾಷಣ ಮಾಡಲಿದ್ದಾರೆ. ಕುಡುಮಲ್ಲಿಗೆ ರಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಯುವಜನ ಮೇಳಕ್ಕೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಹತ್ತು ಹಲವಾರು ಸಂಘ ಸಂಸ್ಥೆಗಳು ಸಹಕರಿಸಿವೆ ಎಂದು ಹೇಳಿದರು.    ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಕೊರಕೋಟೆ ಶ್ರೀನಿವಾಸ್, ಸಂದೀಪ್, ಚೇತನ್‌ಕುಮಾರ್, ಬಿಳುವೆ ಸುಂದರೇಶ್, ಮಂಜುನಾಥ ಶೆಟ್ಟಿ, ಮುನ್ನೂರು ಸುಧಾಕರ್ ಸುದ್ದಿಗೋಷ್ಠಿಯಲ್ಲಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments