ಶಿವಮೊಗ್ಗ

ನ್ಯಾ. ಜಗದೀಶ್ವರ್‌ಗೆ ಬೀಳ್ಕೊಡುಗೆ

ಸಾಗರ: ಇಲ್ಲಿನ ವಕೀಲರ ಸಂಘ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯಲ್ಲಾಪುರಕ್ಕೆ ವರ್ಗಾವಣೆಗೊಂಡಿರುವ ನ್ಯಾಯಾಧೀಶ ಎಂ. ಜಗದೀಶ್ವರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಗದೀಶ್ವರ್, ಸಾಗರ ನ್ಯಾಯಾಲಯದಲ್ಲಿ ಹಿರಿಯ ಹಾಗೂ ಕಿರಿಯ ವಕೀಲರ ಸಮಾಗಮವಿದೆ. ಎಲ್ಲರೂ ಒಮ್ಮನಸ್ಸಿನಿಂದ ಜನರಿಗೆ ನ್ಯಾಯ ದೊರಕಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ. ನಾನು ಈ ನ್ಯಾಯಾಲಯಕ್ಕೆ ವರ್ಗವಾಗಿ ಬಂದಾಗಿನಿಂದ ಎಲ್ಲರ ಸಹಕಾರದಿಂದ ನ್ಯಾಯಾಲಯದ ಎದುರು ಉದ್ಯಾನವನ ನಿರ್ಮಾಣ, ವಾಹನ ನಿಲುಗಡೆ ವ್ಯವಸ್ಥೆ ಇನ್ನಿತರ ಸೌಲಭ್ಯ ಕಲ್ಪಿಸುವಲ್ಲಿ ಶ್ರಮಿಸಿದ್ದೇನೆ. ಇದನ್ನು ವಕೀಲರು ಮುಂದುವರೆಸಿಕೊಂಡು ಹೋಗುವ ಮೂಲಕ ಪರಿಸರ ಪ್ರೇಮವನ್ನು ಮೆರೆಯಬೇಕು ಎಂದು ಸಲಹೆ ಮಾಡಿದರು.
ಸನ್ಮಾನಿತರಾದ ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ಅಶೋಕ ಭಟ್, ಸಾಗರದ ವಕೀಲರ ಸಂಘದ ಕಾರ್ಯವೈಖರಿ ಗಮನಾರ್ಹವಾಗಿದೆ ಎಂದರು.
ನ್ಯಾಯಾಧೀಶರಾದ ಎಂ. ಜಗದೀಶ್ವರ್ ಅವರ ಕುರಿತು ವಕೀಲರಾದ ಎಂ.ಬಿ. ಪುಟ್ಟಸ್ವಾಮಿ, ಎಂ.ಎಸ್. ಗೌಡರ್, ಎಚ್.ಎಂ. ಸದಾನಂದ್, ಕೆ.ಜಿ. ರಾಘವೇಂದ್ರ, ಟಿ.ಬಿ. ಮಂಜುನಾಥ್ ಶೆಟ್ಟಿ ಇನ್ನಿತರರು ಮಾತನಾಡಿದರು.
ಸುದರ್ಶನ್ ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ಅಶೋಕ ಭಟಟ್ಕುರಿತು ಅಭಿನಂದನಾ ಭಾಷಣ ಮಾಡಿದರು. ವಕೀಲರ ಸಂಘದ ಅಧ್ಯಕ್ಷ ಅಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.
 ಶೀಘ್ರ ವಿಲೇವಾರಿ ನ್ಯಾಯಾಲಯದ ನ್ಯಾ. ಜಿ.ಜಿ. ಕುರುವತ್ತಿ, ಪ್ರಧಾನ ಸಿವಿಲ್ ನ್ಯಾ. ಶಾಂತ, ಹಿರಿಯ ವಿಭಾಗದ ನ್ಯಾ. ಸತೀಶ್ ಬಾಳಿ, ಐ.ಪಿ.ನಾಯಕ್ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!