ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪದಾಧಿಕಾರಿಗಳ ಆಯ್ಕೆ

Parashurama
Updated On : 8 Feb 2013, 9:57 am

ಶಿವಮೊಗ್ಗ: ಭದ್ರಾವತಿ ತಾಲೂಕು ಬಂಜಾರ ಸಂಘದ ಕಾರ್ಯಕಾರಿ ಸಮಿತಿ ರಚನೆಯಾಗಿದ್ದು, ಗೌರವಾಧ್ಯಕ್ಷರಾಗಿ ವಿಷ್ಣುನಾಯಕ, ಅಧ್ಯಕ್ಷರಾಗಿ ನಾಗರಾಜ ನಾಯ್ಕ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲಕ್ಷ್ಮಣನಾಯ್ಕ, ಸೋಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್, ಸಹ ಕಾರ್ಯದರ್ಶಿ ಶೇಖರ್, ಖಜಾಂಚಿ ಶಿವನಾಯ್ಕ, ನಿರ್ದೇಶಕರಾಗಿ ಧನಿಕನಾಯ್ಕ, ಉಮಾ ಮಹೇಶ್ವರನಾಯ್ಕ, ನಾಗರಾಜ ನಾಯ್ಕ, ಪ್ರಕಾಶ ನಾಯ್ಕ, ರವಿನಾಯ್ಕ, ತಿಪ್ಪೇಶ್, ಶಂಕರನಾಯ್ಕ, ಶಿವಕುಮಾರ್, ದಿನೇಶ್, ಜಗದೀಶ್, ಶ್ರೀಆನಂದ, ಹನುಮನಾಯ್ಕ, ಬೋಜನಾಯ್ಕ, ಟೀಕ್ಯಾನಾಯ್ಕ, ರವಿ, ನೇಮಕಗೊಂಡಿದ್ದಾರೆ.
ಸರ್ಕಾರಕ್ಕೆ ಮನವಿ
ಶಿವಮೊಗ್ಗ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಫೆ.8ರಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಿದೆ. 2013-14ನೇ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಯ ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಹಣ ವೀಸಲಿಡುವಂತೆ ಒತ್ತಾಯಿಸಲಾಗುವುದು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಮಾಜಿ ಶಾಸಕ  ಕರಿಯಣ್ಣ, ಸುಂದರೇಶ್, ಚಂದ್ರಕುಮಾರ್ ಹಾಗೂ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರುಗಳು ಉಪಸ್ಥಿರಿರುವರು ಎಂದು ವಿಭಾಗದ ಮುಖ್ಯಸ್ಥ ಸಿದ್ದಪ್ಪ ತಿಳಿಸಿದ್ದಾರೆ.
ಸಂತಾಪ
ಶಿವಮೊಗ್ಗ: ರವೀಂದ್ರನಗರದ ಶ್ರೀ ಗಣಪತಿ ದೇವಸ್ಥಾನದ ಖಜಾಂಚಿಯಾಗಿದ್ದ ರುಕ್ಮಿಣಿ ವೇದವ್ಯಾಸ ಅವರ ಪುತ್ರ ಶಶೀಂದ್ರ ನಿಧನಕ್ಕೆ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮರಿಯಪ್ಪ, ಕಾರ್ಯದರ್ಶಿ ಎಂ. ಉಮಾಶಂಕರ ಹಾಗೂ ಉಪಾಧ್ಯಕ್ಷರು ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ಮಹಾಂತಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಸಮಾಜದ ಮುಖಂಡ ಮಹಾದೇವಪ್ಪ ಅವರು ಸಂತಾಪ ಸೂಚಿಸಿದ್ದಾರೆ ಎಂದು ಗೌರವ ಕಾರ್ಯದರ್ಶಿ ದಿನೇಶ್ ತಿಳಿಸಿದ್ದಾರೆ.
13ರ ವರೆಗೆ ಪುಸ್ತಕ ಮಾರಾಟ
ಭದ್ರಾವತಿ: ಪಟ್ಟಣದ ಮಡಿವಾಳ ಮಾಚಿದೇವ ಮಂಟಪದಲ್ಲಿ (ಬಸವೇಶ್ವರ ವೃತ್ತ) ಪುತ್ತೂರಿನ ದೀಪಾ ಬುಕ್ ಹೌಸ್ ವತಿಯಿಂದ ಫೆ.13ರ ವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ. ಪ್ರಸಿದ್ಧ ಸಾಹಿತಿಗಳಾದ ಎಸ್.ಎಲ್. ಭೈರಪ್ಪ, ಶಿವರಾಮ ಕಾರಂತ, ತ.ರಾ.ಸು., ಪೂ.ಚಂ. ತೇಜಸ್ವಿ, ಕುವೆಂಪು, ಯಂಡಮೂರಿ ವೀರೇಂದ್ರನಾಥ್ ಅವರ ಕೃತಿಗಳು ಮಾರಾಟಕ್ಕೆ ಲಭ್ಯವಿರುತ್ತವೆ ಎಂದು ಆಯೋಜಕರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments