ಭಾವಿ ಪರೀಕ್ಷೆಗೆ ಉಚಿತ ತರಬೇತಿ
ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು ನಡೆಸಲು ಉದ್ದೇಶಿಸಿರುವ ಐಎಎಸ್ ಹಾಗೂ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾಗವಹಿಸುವ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಉಚಿತ ತರಬೇತಿಯನ್ನು ಆಯೋಜಿಸುತ್ತಿದೆ.
ಪೂರ್ವಭಾವಿ ತರಬೇತಿಯಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಫೆ. 11ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತಗಂಗೋತ್ರಿ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ವಿವಿ ಕುಲಸಚಿವ ಪ್ರೊ. ಬಿ.ಎಸ್. ವಿಶ್ವನಾಥ್ ತಿಳಿಸಿದ್ದಾರೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821 2515944ನ್ನು ಸಂಪರ್ಕಿಸಬಹುದಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.