ವ್ಯಾನ್ ಡಿಕ್ಕಿ: 5 ಸಾವು
ಶಿವಮೊಗ್ಗ: ವ್ಯಾನ್ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಬಳಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಉಬ್ಬುರಿನ ತಿಮ್ಮಬೋವಿ(55), ಕಮಲಮ್ಮ (40), ನಾಗಮ್ಮ (70), ಮನೋಜ್ (12) ಪ್ರಜ್ಞಾ(8) ಮೃತಪಟ್ಟಿದ್ದು, ಎಲ್ಲರೂ ಒಂದೇ ಕುಟುಂಬದವರು. ಇವರು ಇಲ್ಲಿನ ಹಣಗೆರೆಕಟ್ಟೆಗೆ ಪೂಜೆ ಸಲ್ಲಿಸಲು ವ್ಯಾನ್ನಲ್ಲಿ ತೆರಳುತ್ತಿರುವಾಗ ಈ ಧಾರುಣ ಘಟನೆ ನಡೆದಿದೆ. ಉಳಿದ 8ಜನ ಪ್ರಯಾಣಿಕರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರಕುಮಾರ್ ಹಾಗೂ ಡಿವೈಎಸ್ಪಿ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.