ಬಜೆಟ್ ಬಗ್ಗೆ ಟೀಕಿಸುವುದು ಸರಿಯಲ್ಲ
ಶಿವಮೊಗ್ಗ: ಬಿಜೆಪಿ ಸರ್ಕಾರ ಮಂಡಿಸಿರುವ ಬಜೆಟ್ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಹೇಳಿದರು. ಶನಿವಾರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ನಗರ ಸ್ಥಳೀಯ ಚುನವಾಣೆ ಪ್ರತಿನಿಧಿಗಳ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಜನಗಳಿಗೆ ತಲುಪಬೇಕಾದ ಬಜೆಟ್ನಲ್ಲಿ ಯಾವುದೇ ಲೋಪಗಳಿಲ್ಲ. ನಮ್ಮ ಸ್ಥಳೀಯ ಸಂಸ್ಥೆಗಳಿಗೆ ಎಷ್ಟೆಲ್ಲ ಯೋಜನೆಗಳು ಬಂದಿವೆ ಎಂದು ಎಲ್ಲರಿಗೂ ತಿಳಿದ ವಿಷಯ. ಅದನ್ನು ಯಾವುದೇ ಲೋಪದೋಷಗಳಿಲ್ಲದೇ ಸರಿಯಾಗಿ ಪೂರೈಸುವುದು ನಮ್ಮ ಕರ್ತವ್ಯ ಎಂದರು.
2011ರ ಜನಗಣತಿ ಪ್ರಕಾರ ಚುನಾವಣೆ ನಡೆಯಬೇಕೆಂದು ಸರ್ಕಾರದ ಆಶಯವಾಗಿತ್ತು. ಇದ್ದರಿಂದ ಎಲ್ಲ ವರ್ಗದವರಿಗೆ ಅವಕಾಶ ಸಿಗುತ್ತಿತ್ತು. ಆದರೆ, ಸುಪ್ರೀಂ ಕೋರ್ಟ್ ಆದೇಶದಂತೆ, ಯಾವುದೇ ಜನಗಣತಿ ಪ್ರಕಾರ ಚುನಾವಣೆ ನಡೆದರೂ ಬಿಜೆಪಿ ಎದುರಿಸಲು ಸಿದ್ದವಿದೆ. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರನ್ನು ಚುನಾವಣಾ ಪ್ರಚಾರಕ್ಕೆ ಪ್ರೇರೇಪಿಸಬೇಕು ಎಂದರು.
ಟಿಪ್ಪು ವಿವಿಗೆ ವಿರೋಧ: ಪ್ರತಿಭಟನೆ
ಶಿವಮೊಗ್ಗ: ಅಲ್ಪಸಂಖ್ಯಾಂತರ ವಿಶ್ವವಿದ್ಯಾನಿಲಯಕ್ಕೆ ಟಿಪ್ಪು ಹೆಸರಿಡಲು ವಿರೋಧಿಸುತ್ತಿರುವ ಸಂಘ ಪರಿವಾರದ ಸಂಘಟನೆಗಳ ಕ್ರಮ ಖಂಡಿಸಿ ಕರ್ನಾಟಕ ಕೋಮು ಸೌಹಾರ್ಧ ವೇದಿಕೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಟಿಪ್ಪು ಸುಲ್ತಾನ್ ಕೇವಲ ಮುಸ್ಲಿಂರ ಸಮುದಾಯಕ್ಕೆ ಸಿಮೀತವಾಗಿಲ್ಲ. ಆದರೆ, ರಾಜಕೀಯ ಪಕ್ಷಗಳು ತಮ್ಮ ಮತಬ್ಯಾಂಕ್ ಉದ್ದೇಶದಿಂದ ಟಿಪ್ಪು ಬಗ್ಗೆ ಅಪಪ್ರಚಾರ ನಡೆಸುತ್ತಿವೆ. ರಾಜ್ಯದ ಕೆಲ ಸಂಘ ಪರಿವಾರದ ನಾಯಕರು ಅನವಶ್ಯಕವಾಗಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ವಿಶ್ವವಿದ್ಯಾನಿಲಯದಲ್ಲಿ ಶೇ.50ರಷ್ಟು ಸೀಟುಗಳು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿರುತ್ತವೆ. ಅಲ್ಲಿ ಕೇವಲ ಒಂದು ಸಮುದಾಯದ ವಿದ್ಯಾರ್ಥಿಗಳು ಮಾತ್ರ ಸಿಮೀತವಾಗಿಲ್ಲ, ಇತರೆ ವಿವಿಗಳಂತೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಅವಕಾಶವಿದೆ. ಇದನ್ನು ಸಂಘ ಪರಿವಾರದವರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವೇದಿಕೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್. ಅಶೋಕ್, ಜಿಲ್ಲಾ ಕಾರ್ಯದರ್ಶಿ ಕೆ.ಪಿ. ಶ್ರೀಪಾಲ್, ರಾಜ್ಯ ಸಂಘಟನಾ ಸಂಚಾಲಕ ಎಂ. ಗುರುಮೂರ್ತಿ ಮತ್ತಿತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.