ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Parashurama
Updated On : 11 Feb 2013, 10:56 am

ಶಿವಮೊಗ್ಗ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮಾಧ್ಯಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕವಾಗಿ 1 ಸಾವಿರ ರುಪಾಯಿಗಳ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕ್ರೀಡಾ ವಿದ್ಯಾರ್ಥಿವೇತನ ಪಡೆಯಲಿಚ್ಚಿಸುವ ಅಭ್ಯರ್ಥಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟು ಆಗಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತ ಕ್ರೀಡಾ ಸಂಸ್ಥೆಗಳು 2012ರಲ್ಲಿ  ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು.
 ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನಡೆಸಿದ ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಹಾಗೂ ಮಹಿಳಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ, ಗ್ರಾಮೀಣ, ಮಹಿಳಾ ಕ್ರೀಡಾ ಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು, ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಆಫ್ ಗೇಮ್ಸ್ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿಯಲ್ಲಿ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ ಕ್ರೀಡಾ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿ ವೇತನದ ಮೊತ್ತ ವಾರ್ಷಿಕ 1ಸಾವಿರ ರುಪಾಯಿಗಳಿಗೆ ಮುಂಗಡ ರಸೀದಿಯನ್ನು ಕ್ರೀಡಾಪಟುವಿನ ಸಹಿ ಮಾಡಿ, ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಮುದ್ರೆಯೊಂದಿಗೆ ದೃಢೀಕರಿಸಿ ಸಲ್ಲಿಸಬೇಕು.
ಅರ್ಹ ಕ್ರೀಡಾ ಪಟುಗಳು ನಿಗದಿತ ನಮೂನೆಯ ಅರ್ಜಿಯನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನೆಹರು ಕ್ರೀಡಾಂಗಣ ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಫೆ. 28ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ- 08182-223328.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments