ಕ್ಷೇತ್ರದಲ್ಲಿ ನನ್ನ ವಿರುದ್ಧ ಪ್ರತಿಭಟನೆ ನಡೆದಿಲ್ಲ
ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಎಲ್ಲಾ 259 ಹಳ್ಳಿಗಳಿಗೆ ನಾನು ನಿರಂತರ ಭೇಟಿ ನೀಡಿದ್ದೇನೆ. ಎಲ್ಲಿಯೂ ನನ್ನ ವಿರುದ್ಧ ಪ್ರತಿಭಟನೆ ನಡೆದಿಲ್ಲ ಎಂದು ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಜಿ. ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಮಾಜಿ ಶಾಸಕ ಕರಿಯಣ್ಣ ಅವರು ಮುಖ್ಯಮಂತ್ರಿ ಶೆಟ್ಟರ್ ಅವರ ಕಾರ್ಯಕ್ರಮವನ್ನು ಗಿಮಿಕ್ ಎಂದು ಬಣ್ಣಿಸಿದ್ದಾರೆ. ಅವರು ಶಾಸಕರಾಗಿದ್ದ 10 ವರ್ಷ ಅವಧಿಯಲ್ಲಿ ಅವರು ಮಾಡಿದ್ದು ಗಿಮಿಕ್ ಮಾತ್ರ ಎಂದರು.
ಹೊಳೆಹೊನ್ನೂರು ಭಾಗವನ್ನು ನಿರ್ಲಕ್ಷಿಸಿದ್ದೇನೆ ಎಂಬುದು ಸರಿ ಅಲ್ಲ. ಇದನ್ನು ಪ್ರತ್ಯೇಕ ತಾಲೂಕಾಗಿ ಘೋಷಿಸುವಂತೆ ಹಲವು ಬಾರಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದೇನೆ. ಬಜೆಟ್‌ನಲ್ಲಿ ಘೋಷಣೆಯಾಗುವ ನಿರೀಕ್ಷೆ ಇತ್ತು. ಆಗದ ಕಾರಣ ಮತ್ತೆ ಅವರ ಗಮನಕ್ಕೆ ತಂದಿದ್ದೇನೆ. ಬಜೆಟ್‌ಗೆ ಉತ್ತರಿಸುವ ಸಂದರ್ಭದಲ್ಲಿ ಘೋಷಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಹೊಸ ತಾಲೂಕು ಶಿವಮೊಗ್ಗವನ್ನೇ ಕೇಂದ್ರವಾಗಿ ಹೊಂದಲಿದೆ ಎಂದರು.
ಹಾಯ್‌ಹೊಳೆ ಗ್ರಾಮದ ಬಳಿ ನನಗೆ ಸೇರಿದ 25 ಎಕರೆ ಜಮೀನು ಇದೆ. ನಾನು ಬ್ಯಾಂಕ್ ಉದ್ಯೋಗಿಯಾಗಿದ್ದಾಗಲೇ ಖರೀದಿಸಿದ್ದೆ. ಯಾವುದೇ ಒತ್ತುವರಿ ಮಾಡಿಲ್ಲ. ಕಾನೂನುಬದ್ಧವಾಗಿ ಖರೀದಿ ಮಾಡಿದ್ದೇನೆ ಎಂದರು.
ಸಂಸದ ಆಯನೂರು ಮಂಜುನಾಥ್, ಎಂ.ಎಸ್. ಮಹೇಂದ್ರನಾಥ್, ಜಿ.ಪಂ. ಮಾಜಿ ಅಧ್ಯಕ್ಷ ಬಸವರಾಜಪ್ಪ ಇತರರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.