ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಶಿವಮೊಗ್ಗ: ಬಜೆಟ್ನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ, ವರ್ಗಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡಗಳ ಮಹಿಳಾ ಸಂಘಗಳಿಗೆ ತಲಾ 5 ಲಕ್ಷ ಸಾಲ ಮತ್ತು ಸಹಾಯ ಧನವಾಗಿ 1 ಲಕ್ಷ ನೀಡುವುದು, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ವಾಸಿಸುವ ಎಸ್ಸಿ, ಎಸ್ಟಿ ಜನರಿಗೆ ನಿವೇಶನ ಮನೆಯನ್ನು ನಿರ್ಮಿಸಿಕೊಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿಭಾಗದ ಅಧ್ಯಕ್ಷ ಎಂ.ಎಸ್. ಸಿದ್ದಪ್ಪ ಮತ್ತಿತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.