ಶಿವಮೊಗ್ಗ

ಸೂಕ್ತ ಪರಿಹಾರ ನೀಡಲು ಒತ್ತಾಯ

ಶಿವಮೊಗ್ಗ: ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬಗರ್ ಹುಕುಂ ಸಾಗುವಳಿದಾರರು ದೇವಕಾತಿಕೊಪ್ಪ- ಸಿದ್ಲಿಪುರ ರೈತ ಒಕ್ಕೂಟ ಸಮಿತಿಯ ನೇತೃತ್ವದಲ್ಲಿ ಸಿಎಂ ಹಾಗೂ ಡಿಸಿಎಂಗೆ ಭಾನುವಾರ ಮನವಿ ಅರ್ಪಿಸಿದರು.
ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಗ್ರಾಮದ ಸರ್ವೇ ನಂ.6 ಮತ್ತು 28ರಲ್ಲಿ ಸುಮಾರು 58 ಎಕರೆ ಜಮೀನನ್ನು 33 ರೈತರು ಕಳೆದ 35 ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದಾರೆ. ಇದೇ ಜೀವನದ ಆಧಾರವಾಗಿದ್ದು ಬಹುತೇಕರು ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಬಡವರಾಗಿದ್ದಾರೆ. ಈ ಜಮೀನನ್ನು ಕಳೆದ ಎರಡು ವರ್ಷಗಳ ಹಿಂದೆ ಸುವರ್ಣ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ಕೆಐಎಡಿಬಿ ಇಲಾಖೆ ಭೂ ಸ್ವಾಧೀನ ಪಡಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಸೂಕ್ತ ಪರಿಹಾರ ಧನ ನೀಡುವ ಭರವಸೆ ನೀಡಿತ್ತು ಎಂದು ರೈತರು ಮನವಿಯಲ್ಲಿ ತಿಳಿಸಿದ್ದಾರೆ.
ಎಕರೆಗೆ ತಲಾ 10 ಲಕ್ಷ ಪರಿಹಾರ ನೀಡಬೇಕು. ಆಶ್ರಯ ಬಡಾವಣೆಯಲ್ಲಿ ನಿವೇಶನ ನೀಡಬೇಕು ಎಂದು ರೈತರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಮನವಿ ಅರ್ಪಿಸುವ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಲೋಕೇಶಪ್ಪ, ನಂದೀಶ, ಲಕ್ಷ್ಮಣಪ್ಪ, ಮಲ್ಲೇಶಪ್ಪ, ಗೇಮ್ಲಾ ನಾಯ್ಕ ಸೇರಿದಂತೆ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!