ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಹಿರಿಯರ ಜೀವನಾದರ್ಶ ರೂಢಿಸಿಕೊಳ್ಳಿ

Parashurama
Updated On : 11 Feb 2013, 10:56 am

ಶಿವಮೊಗ್ಗ: ನಾಡಿನ ಹಿರಿಯ ಮಾರ್ಗದರ್ಶಕರ ಜೀವನಾದರ್ಶಗಳನ್ನು ರೂಢಿಸಿಕೊಳ್ಳುವಂತೆ ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಸುಲೋಚನ ಜಿ.ಕೆ. ಭಟ್ ಮಕ್ಕಳಿಗೆ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ರಾಜ್ಯ ಬಾಲ ವಿಕಾಸ ಅಕಾಡೆಮಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಏರ್ಪಡಿಸಿದ್ದ ಅಂತರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸೂಕ್ತ ಮಾರ್ಗದರ್ಶನದ ಕೊರತೆ, ಡ್ರಗ್ ಮಾಫಿಯಾ, ಮಾಧ್ಯಮಗಳ ಪ್ರಭಾವ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆಯಿಂದಾಗಿ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ವಿಶೇಷ ಅನುದಾನ: ಬಾಲಭವನದ ವತಿಯಿಂದ ಹಮ್ಮಿಕೊಳ್ಳುವ ಚಟುವಟಿಕೆಗಳಿಗಾಗಿ ಸ್ವತಂತ್ರ ಕಟ್ಟಡ ಅಗತ್ಯವಿರುವುದನ್ನು ಮನಗಂಡು ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ಮೀಸಲಿರಿಸಿದೆ. ಈ ಅನುದಾನದಲ್ಲಿ ರಾಜ್ಯದ ಆಯ್ದ 17 ಜಿಲ್ಲಾ ಕೇಂದ್ರಗಳಲ್ಲಿ ಬಾಲಭವನ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದರು.
ಸತ್ಪ್ರಜೆಗಳಾಗಲಿ: ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ಮಾತನಾಡಿ, ಮಕ್ಕಳು ಉತ್ತಮ ಸಂಗತಿಗಳನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಸತ್ಪ್ರಜೆಯಾಗಿ ದೇಶಕ್ಕೆ ಆಸ್ತಿಯಾಗಿ ಬದುಕಬೇಕು ಎಂದರು. ಜಿಪಂ ಸಿಇಒ ಶಶಿಕಾಂತ್ ಸೆಂಥಿಲ್ ಮಾತನಾಡಿದರು. ಈ ಸಂದರ್ಭದಲ್ಲಿ ಬೆಳ್ಳಿಮಂಡಲ ಜಿಲ್ಲಾ ಘಟಕದ ಸಂಚಾಲಕ ವೈದ್ಯ, ರಾಜ್ಯ ಬಾಲಭವನ ಸಮಿತಿ ನಿರ್ದೇಶಕ ಪಿ. ಶಿವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಕಮಲಾಕರ್, ನಗರಸಭಾಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಉಪಾಧ್ಯಕ್ಷ ರಾಮು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್. ಬಸವರಾಜಪ್ಪ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಲಕ್ಷ್ಮೀಕಾಂತಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಎಚ್. ಕೃಷ್ಣ ವಂದಿಸಿದರು. ಅಂತರ ಜಿಲ್ಲಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ದಾವಣಗೆರೆ, ಉಡುಪಿ, ಚಿತ್ರದುರ್ಗ, ಕಾರವಾರ ಮತ್ತು ಹಾವೇರಿ ಜಿಲ್ಲೆಯ ಬಾಲಭವನದ ಮಕ್ಕಳು ಪಾಲ್ಗೊಂಡಿದ್ದರು. ಇದೇ ವೇದಿಕೆಯಲ್ಲಿ ಶೌರ್ಯ ಪ್ರಶಸ್ತಿ ವಿಜೇತೆ ನಯನ ಅವರನ್ನು ಗೌರವಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments