ಕ್ರೀಡೆಗಳು ಮಾನಸಿಕ ಸಮತೋಲನಕ್ಕೆ ಸಹಕಾರಿ
ಜೋಗ್‌ಫಾಲ್ಸ್: ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆಯಿಂದ ಕ್ರೀಡಾ ಮನೋಭಾವ ಮೆರೆದಂತಾಗುತ್ತದೆ ಎಂದು ಜೋಗ್-ಕಾರ್ಗಲ್ ಪಪಂ ಅಧ್ಯಕ್ಷ ಕೆ.ಸಿ. ಹರೀಶ್‌ಗೌಡ ತಿಳಿಸಿದರು.
ಕಾರ್ಗಲ್ ಕೆಪಿಸಿ ಶಾರದಾ ಮಹಿಳಾ ಸಮಾಜದ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡೆ ಶಾಂತಿಯ ಸಂಕೇತವಾಗಿದ್ದು, ಕ್ರೀಡೆಯಿಂದ ಶಾಂತಿ-ನೆಮ್ಮದಿ ಸಾಧ್ಯ. ವೈರತ್ವವನ್ನು ಓಡಿಸುವ ಶಕ್ತಿ ಕ್ರೀಡೆಗಿದೆ. ಯಾಂತ್ರಿಕ ಜೀವನದಿಂದ ಬೇಸತ್ತ ದುಡಿದ ಜೀವಕ್ಕೆ ಲವಲವಿಕೆಯಾಗಿರಲು ಕ್ರೀಡೆಗಳಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.
ಕೆಪಿಸಿ ಶಾರದಾ ಮಹಿಳಾ ಸಮಾಜದ ಅಧ್ಯಕ್ಷೆ ಲಕ್ಷ್ಮೀ ರಾಜು ಮಾತನಾಡಿ, ಮಹಿಳೆಯರು ಕೇವಲ ಮನೆಗೆಲಸಕ್ಕೆ ಸೀಮಿತವಾಗಿರದೇ ಸಾಮಾಜಿಕ, ಕ್ರೀಡಾ ಕ್ಷೇತ್ರಗಳಲ್ಲೂ ತೊಡಗಿಸಿಕೊಳ್ಳುವುದರಿಂದ ಸಮಾಜಕ್ಕೆ ತಮ್ಮ ಕೈಲಾದ ಸಹಾಯ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಪಂದ್ಯಾವಳಿಯ ತೀರ್ಪುಗಾರರಾಗಿ ಅಣ್ಣಪ್ಪ ನಾಯ್ಕ್, ವಿಜಯ್ ನಾಯ್ಕ್, ನಾಗರಾಜ್ ಭಾಗವಹಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.