ಜಿಲ್ಲೆಯ ಕೆಲವೆಡೆ ವೈದ್ಯರ ಮುಷ್ಕರ
ಶಿವಮೊಗ್ಗ: ರಾಜ್ಯಾದ್ಯಂತ ಸರ್ಕಾರಿ ವೈದ್ಯರ ಮುಷ್ಕರ ನಡೆಸುತ್ತಿದ್ದು, ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಇದರ ಬಿಸಿ ತಟ್ಟಿದೆ.
ಶಿಕಾರಿಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಯಾವುದೇ ವೈದ್ಯರು ಕಾರ್ಯನಿರ್ವಹಿಸಿಲ್ಲ. ಜಿಲ್ಲಾ ಸರ್ಜನ್ ಖುದ್ಧಾಗಿ ಎಲ್ಲಾ ಕಾರ್ಯವನ್ನು ನಿರ್ವಹಿಸಬೇಕಾಯಿತು. ಮರಣೋತ್ತರ ಪರೀಕ್ಷೆ ಸೇರಿದಂತೆ ಎಲ್ಲಾ ರೋಗಿಗಳಿಗೂ ಅವರೇ ಸ್ಪಂದಿಸಿದರು.
ಸೊರಬ ತಾಲೂಕಿನ ವೈದ್ಯರು ಸಹ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ತುರ್ತು ಚಿಕಿತ್ಸೆ ಪ್ರಕರಣಗಳು ದಾಖಲಾಗಿಲ್ಲ. ಇದ್ದರಿಂದ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಕಿಕ್ಕಿರಿದು ತಂಬಿಕೊಂಡಿದ್ದವು. : ಶಿರಾಳಕೊಪ್ಪದಲ್ಲಿ ವೈದ್ಯರು ಪ್ರತಿಭಟನೆ ನಡೆಸಿದ್ದು, ರೋಗಿಗಳು ಆಸ್ಪತ್ರೆಯ ಬಾಗಿಲಲ್ಲೇ ಕುಳಿತು ಕಾದ ದೃಶ್ಯಗಳ ಕಂಡುಬಂದವು. ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳಿಗೆ ಚಿಕಿತ್ಸೆ ನೀಡಲಿಲ್ಲ. ಆದರೆ, ಎಲ್ಲಾ ಒಳ ರೋಗಿಗಳಿಗೆ ಚಿಕಿತ್ಸೆ ನೀಡಲಾಯಿತು. ಭದ್ರಾವತಿಯಲ್ಲಿಯು ಎಂದಿನಂತೆ ವೈದ್ಯರು ಕಾರ್ಯನಿರ್ವಹಿಸಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವೈದ್ಯರು ನಡೆಸಿದ ಮುಷ್ಕರದಿಂದ ನಗರದ ಮೆಗ್ಗಾನ್ ಆಸ್ಪತ್ರೆಗೆ ಎಲ್ಲಾ ರೋಗಿಗಳು ದಾಖಲಾಗಿದ್ದರು. ಮಾಮೂಲಿ ದಿನಕ್ಕಿಂತ ಸೋಮವಾರ ಆಸ್ಪತ್ರೆಯಲ್ಲಿ ರೋಗಿಗಳು ಹೆಚ್ಚಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.