ಬಜೆಟ್ನಲ್ಲಿ ಕಬ್ಬು ಬೆಳೆಗಾರರಿಗೆ ಅನ್ಯಾಯ
ಭದ್ರಾವತಿ: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಂಡಿಸಿದ ಬಜೆಟ್ನಲ್ಲಿ ಕಬ್ಬು ಬೆಳೆಗಾರರ ಬಗ್ಗೆ ಚಕಾರವನ್ನೂ ಎತ್ತದೆ ಕಬ್ಬು ರೈತರಿಗೆ ಅನ್ಯಾಯ ಮಾಡಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಭದ್ರಾವತಿ ಘಟಕದ ಪದಾಧಿಕಾರಿಗಳು ಆರೋಪಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಕೆ. ಈರಣ್ಣ, ಪ್ರಧಾನ ಕಾರ್ಯದರ್ಶಿ ಕೃಷ್ಣೇಗೌಡ ಹಾಗೂ ಜಿಲ್ಲಾ ಸಂಚಾಲಕ ಎನ್.ಎಚ್.ದೇವಕುಮಾರ್ ಅವರು ಮುಖ್ಯಮಂತ್ರಿಗಳು ಕೃಷಿಗಾಗಿ 22ರು.10 ಕೋಟಿ ಮೀಸಲಿಟ್ಟಿದ್ದರೂ ಅದು ಚುನಾವಣಾ ತಂತ್ರವಾಗಿದ್ದು, ರೈತ ಸಮುದಾಯಕ್ಕೆ ಇದರಿಂದ ಯಾವುದೇ ತರಹದ ಅನುಕೂಲವಿಲ್ಲವೆಂದು ತಿಳಿಸಿದ್ದಾರೆ.
ವಂಚಿಸಿದ್ದಾರೆ: ಮುಖ್ಯಮಂತ್ರಿಗಳು ಪ್ರಮುಖ ರೈತರ ಸಮ್ಮುಖದಲ್ಲಿ ಜನವರಿ 2ರು.ರಂದು ನಡೆಸಿದ ಬಜೆಟ್ ಪೂರ್ವಭಾವಿ ಸಭೆಯಲ್ಲಿ 2011-12 ಮತ್ತು 2012-1ರು.ನೇ ಸಾಲಿನ ಕಬ್ಬಿನ ಬೆಲೆ ನಿಗದಿ ಬಗ್ಗೆ ಮುಂದಿನ ಅಧಿವೇಶನದಲ್ಲಿ ನಿಗದಿ ಪಡಿಸುವುದಾಗಿ ಭರವಸೆ ನೀಡಿ ಈಗ ಕಬ್ಬು ಬೆಳೆಗಾರರನ್ನು ವಂಚಿಸಿದ್ದಾರೆಂದು ಆರೋಪಿಸಿದ್ದಾರೆ.
ಎಂಪಿಎಂ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ 60ರಿಂದ 70 ದಿನಗಳಾದರೂ ಹಣ ಪಾವತಿ ಮಾಡಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸುವುದಾಗಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.