ಸ್ಕೌಟ್ಸ್ನಿಂದ ದೈಹಿಕ, ಮಾನಸಿಕ ಸದೃಢತೆ ಸಾಧ್ಯ: ವಿಪುಲ್ ಬನ್ಸಲ್
ಶಿವಮೊಗ್ಗ: ವಿದ್ಯಾರ್ಥಿಗಳು ಸ್ಕೌಟ್ಸ್ಗೆ ಸೇರ್ಪಡೆಯಾಗಬೇಕು. ಇದರಿಂದ ದೈಹಿಕ- ಮಾನಸಿಕ ಸದೃಢತೆ ಹೊಂದಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ತಿಳಿಸಿದರು.
ಸ್ಕೌಟ್ಸ್ ಭವನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಮ್ಮಿಕೊಂಡಿದ್ದ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಸ್ಕೌಟ್ಸ್ ಗೈಡ್ಸ್ನಿಂದ ಭವಿಷ್ಯದಲ್ಲಿ ಮೌಲ್ಯಯುತ, ಶಿಸ್ತಿನ ಜೀವನ ನಡೆಸಲು ಸಾಧ್ಯ. ಮುಖ್ಯವಾಗಿ ಜೀವನದಲ್ಲಿ ಶಿಸ್ತು, ಸಾಮಾಜಿಕ ಬದ್ಧತೆ, ನಿಷ್ಟೆ ಬೆಳೆಸಿಕೊಳ್ಳಲು ಅವಕಾಶ ಸಿಗುತ್ತದೆ ಎಂದರು.
ನೀತಿಯುಕ್ತ ಜೀವನ: ಗೈಡ್ಸ್ ಸಂಸ್ಥೆಯ ಜಿಲ್ಲಾ ಆಯುಕ್ತರಾದ ಎಸ್.ವೈ. ಅರುಣಾದೇವಿ ಮಾತನಾಡಿ, ಸ್ಕೌಟ್ ಹಾಗೂ ಗೈಡ್ಸ್ನಿಂದ ನೀತಿಯುಕ್ತ ಜೀವನ ನಡೆಸಲು ಸಾಧ್ಯ. ಹಾಗೆಯೇ ಉತ್ತಮ ಗುಣ- ಮೌಲ್ಯ ಬೆಳೆಸಿಕೊಳ್ಳಬಹುದು ಎಂದರು.
ಇಂದಿನ ಸಾಮಾಜಿಕ ವ್ಯವಸ್ಥೆ ಕ್ಷಿಪ್ರವಾಗಿ ಬದಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮೌಲ್ಯಗಳು ಮರೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ತರಬೇತಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕಡ್ಡಾಯಗೊಳಿಸುವ ಅಗತ್ಯತೆ ಹೆಚ್ಚಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಸ್ಕೌಟ್ಸ್ ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ರಮೇಶ್ ಶಾಸ್ತ್ರಿ, ಜಿಲ್ಲಾ ಆಯುಕ್ತ ಎಸ್. ಉಮೇಶ್, ಕೆ.ಪಿ. ಬಿಂದುಕುಮಾರ್ ಮೊದಲಾದವರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.