ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

16 ರಂದು ಬಿಜೆಪಿ ಕಾರ್ಯಕರ್ತರ ಸಭೆ

Parashurama
Updated On : 14 Feb 2013, 10:55 am

ಸಾಗರ: ಮುಂದಿನ ನಗರಸಭಾ ಚುನಾವಣೆಗೆ ಸಿದ್ಧತೆ ಹಾಗೂ ಹಾಲಿ ನಗರಸಭೆಯಲ್ಲಿ ಬಿಜೆಪಿ ಐದು ವರ್ಷಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸುವ ಹಿನ್ನೆಲೆಯಲ್ಲಿ 16 ರಂದು ಸಂಜೆ 5ಕ್ಕೆ ಶಾರದಾಂಬಾ ಸಭಾಭವನದಲ್ಲಿ ಬಿಜೆಪಿ ನಗರ ವ್ಯಾಪ್ತಿಯ ಪ್ರಮುಖ ಕಾರ್ಯಕರ್ತರ ಸಭೆ ಕರೆಯಲಾಗಿದೆ.
 ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್.ವಿ. ಕೃಷ್ಣಮೂರ್ತಿ ಈ ಕುರಿತು ಮಾಹಿತಿ ನೀಡಿ, ಶಾಸಕ ಗೋಪಾಲಕೃಷ್ಣ ಬೇಳೂರು, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ, ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ, ಪಕ್ಷದ ರಾಜ್ಯ ಉಪಾಧ್ಯಕ್ಷ ಎಂ.ಬಿ. ಭಾನುಪ್ರಕಾಶ್ ಇತರರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
 ಕರ್ನಾಟಕ ಜನತಾ ಪಕ್ಷ ಸ್ಥಾಪನೆಯಿಂದಾಗಿ ಕ್ಷೇತ್ರವ್ಯಾಪ್ತಿಯಲ್ಲಿ ಬಿಜೆಪಿ ಮೂಲೆಗುಂಪಾಗುತ್ತದೆ ಎಂದು ಕೆಲವರು ಭ್ರಮಿಸಿದ್ದರು. ಆದರೆ ಕೆಲವು ದಿನಗಳ ಹಿಂದೆ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಸೇರಿದ್ದ ಕಾರ್ಯಕರ್ತರ ಸಂಖ್ಯೆ ಕೆಲವರ ಭ್ರಮನಿರಶನಕ್ಕೆ ಕಾರಣವಾಗಿದೆ. ಕ್ಷೇತ್ರವ್ಯಾಪ್ತಿಯಲ್ಲಿ ಬಿಜೆಪಿ ಅತ್ಯಂತ ಬಲಿಷ್ಠವಾಗಿದ್ದು, ಮುಂದಿನ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ ಹೆಚ್ಚು ಮತಗಳನ್ನು ಪಡೆದು ಜಯಗಳಿಸುವುದರಲ್ಲಿ ಅನುಮಾನವಿಲ್ಲ ಎಂದರು.
 ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶರಾವತಿ ಸಿ. ರಾವ್, ನಗರಸಭೆ ಅವಧಿ 14ಕ್ಕೆ ಕೊನೆಗೊಳ್ಳಲಿದ್ದು, 2013-14ನೇ ಸಾಲಿನ ಬಜೆಟ್ ಕೊಡದೆ ಇರುವ ಬಗ್ಗೆ ಪಕ್ಷಕ್ಕೆ ಸಾಕಷ್ಟು ಬೇಸರವಿದೆ. ಬಜೆಟ್ ಕುರಿತು ಸಭೆ ಕರೆಯುವಂತೆ ನಗರಸಭೆ ಅಧ್ಯಕ್ಷರ ಮೇಲೆ ಒತ್ತಡ ತಂದರೂ ಅವರು ಮನಸ್ಸು ಮಾಡಲಿಲ್ಲ. ನಗರಸಭೆ ಅಧ್ಯಕ್ಷರು ಕೆಜೆಪಿ ಯಲ್ಲಿದ್ದಾರೋ ಅಥವಾ ಬಿಜೆಪಿಯಲ್ಲಿದ್ದಾರೋ ಎನ್ನುವ ಅನುಮಾನ ಕಾಡುತ್ತಿದೆ ಎಂದು ಹೇಳಿದರು.
 ನಗರಸಭೆ ಉಪಾಧ್ಯಕ್ಷ ಡಿ. ರವಿ, ಜಗದೀಶ್ ಒಡೆಯರ್, ಸಂತೋಷ ಶೇಟ್, ಸತೀಶಬಾಬು, ಕಸ್ತೂರಿ ನಾಗರಾಜ್, ರಾಜು ಮಡಿವಾಳ ಹಾಜರಿದ್ದರು.
ದೇಹದಾರ್ಢ್ಯ ಪಟು ಆನಂದರಾವ್‌ಗೆ ಸನ್ಮಾನ
ಭದ್ರಾವತಿ: 1995ರಲ್ಲಿ ಆಸ್ಚ್ರೇಲಿಯಾದಲ್ಲಿ ರಾಷ್ಟ್ರಮಟ್ಟದ ಏಳನೇ ಸ್ಥಾನ, 96ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪಧೆರ್ಯಯಲ್ಲಿ ಸ್ವರ್ಣ ಪದಕ, 2006ರಲ್ಲಿ ಬೆಂಗಳೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಸ್ವರ್ಣಪದಕ ಮತ್ತು 2010ರಲ್ಲಿ ರಾಂಚಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಗಳಿಸಿದ ಕಾಗದ ಕಾರ್ಖಾನೆಯ ಉದ್ಯೋಗಿ ಡಿ.ಟಿ ಆನಂದರಾವ್ ಅವರನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಸನ್ಮಾನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments