ಕಾರ್ಯಾಗಾರ
ಶಿವಮೊಗ್ಗ: ನ್ಯಾಷನಲ್ ಕೋಚಿಂಗ್ ಅಕಾಡೆಮಿ ಫೆ.17ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಸವಳಂಗ ರಸ್ತೆಯಲ್ಲಿರುವ ಜ್ಞಾನ ಸಾಗರ ಡಿಇಡಿ ಕಾಲೇಜು ಆವರಣದಲ್ಲಿ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರ ಹಮ್ಮಿಕೊಂಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಯುಕ್ತ ಪರೀಕ್ಷಾ ಮಾಹಿತಿ ಮತ್ತು ಕನ್ನಡ ವಿಷಯವಾಗಿ ಸಂಪೂರ್ಣ ವ್ಯಾಕರಣ ಕುರಿತಂತೆ ಮಾಹಿತಿ ನೀಡಲಾಗುವುದು ಎಂದು ಅಕಾಡೆಮಿ ತಿಳಿಸಿದೆ. ವಿವರಗಳಿಗಾಗಿ- 9945944814.
ಕ್ರಿಕೆಟ್ ಪಂದ್ಯಾವಳಿ
ಶಿವಮೊಗ್ಗ: ನೇಚರ್ ಕ್ರಿಕೆಟ್ ಅಸೋಸಿಯೇಷನ್ ಮಾರ್ಚ್ 9 ಮತ್ತು 10 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿಷ್ಠಿತ ತಂಡಗಳನ್ನು ಆಹ್ವಾನಿಸಲಾಗಿದೆ. ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ, ಪ್ರಥಮ ಬಹುಮಾನ 75 ಸಾವಿರ, ದ್ವಿತೀಯ 25 ಸಾವಿರ ಹಾಗೂ ಪಾರಿತೋಷಕ ಮತ್ತು ಸರಣಿ ಸರ್ವೋತ್ತಮ ಪ್ರಶಸ್ತಿ ನೀಡಲಾಗುವುದು. ಆಸಕ್ತ ತಂಡಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಅಸೋಸಿಯೇಷನ್ಸ್ದಸ್ಯ ಅಜಯ್ ಕುಮಾರ ತಿಳಿಸಿದ್ದಾರೆ. ವಿವರಗಳಿಗಾಗಿ- 9900689811.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.