ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಾಜ್ಯ ಸರ್ಕಾರದ ವಿರುದ್ಧ ಶಿಕ್ಷಕರ ಪ್ರತಿಭಟನೆ

Parashurama
Updated On : 14 Feb 2013, 11:10 am

ಶಿವಮೊಗ್ಗ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಶಿಕ್ಷಕರ ವೇತನ ಕುರಿತಂತೆ ಪ್ರಸ್ತಾಪಿಸದೆ ಇರುವುದನ್ನು ಖಂಡಿಸಿ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಿಕ್ಷಕರ, ಉಪನ್ಯಾಸಕರ ವೇತನ ತಾರತಮ್ಯದಲ್ಲಿ ಆಗುತ್ತಿರುವ ಬದಲಾವಣೆಯನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಸರ್ಕಾರ ಯಾವ ರೀತಿಯಲ್ಲಿಯೂ ಸ್ಪಂದಿಸಿಲ್ಲ. ಅಲ್ಲದೇ ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಕರು, ಉಪನ್ಯಾಸಕರ ವೇತನಕ್ಕೆ ಸಂಬಂಧಿಸಿದಂತೆ ಯಾವುದೇ ಹಣ ನೀಡದಿರುವುದು ಖಂಡನೀಯ ಎಂದು ಪ್ರತಿಭಟನಾಕಾರು ಆರೋಪಿಸಿದರು.
ಅತ್ಯಂತ ಕಡಿಮೆ ಮೂಲ ವೇತನ: ಕೇಂದ್ರ ಹಾಗೂ ನೆರೆ ರಾಜ್ಯಗಳನ್ನು ಹೋಲಿಕೆ ಮಾಡಿದರೇ ರಾಜ್ಯದ ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರು, ಉಪನ್ಯಾಸಕರು ಅತ್ಯಂತ ಕಡಿಮೆ ಮೂಲ ವೇತನ ಪಡೆಯುತ್ತಿದ್ದಾರೆ. ಈ ಸಂಬಂಧ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಕರ ವೇತನ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿತ್ತು. ಆದರೆ, ರಾಜ್ಯ ಸರ್ಕಾರ ಬಜೆಟಟ್ಮಂಡನೆ ಸಂದರ್ಭದಲ್ಲಿ ಶಿಕ್ಷಕರು, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಮತ್ತು ಮೂಲ ವೇತನದಲ್ಲಿ ವಿಶೇಷ ವೇತನ ವಿಲೀನಗೊಳಿಸುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡದಿರುವುದು ಬೇಸರ ತಂದಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕೂಡಲೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾದರಿಯಲ್ಲಿ ಶಿಕ್ಷಕ, ಉಪನ್ಯಾಸಕರುಗಳಿಗೆ ವೇತನ ಶ್ರೇಣಿಯನ್ನು ನಿಗದಿ ಮಾಡಬೇಕು. ವಿಶೇಷ ಭತ್ಯೆಯನ್ನು ಮೂಲ ವೇತನದಲ್ಲಿಯೇ ವಿಲೀನಗೊಳಿಸಬೇಕು. ಕೇಂದ್ರ ಸರ್ಕಾರದ ಮಾದರಿಯಲ್ಲಿ ಮನೆ ಭತ್ಯೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ, ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ರಾಜಶೇಖರ್, ಲೋಕೇಶ್ವರಪ್ಪ, ಡಿ.ಆರ್. ಉಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments